ಬೆಂಗಳೂರು: ಬಮೂಲ್ ಡೈರಿಯಲ್ಲಿ ಉಪವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮೋಹನ್ ಕುಮಾರ್(52) ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕುಂಟನಹಳ್ಳಿ ಗ್ರಾಮದ ಮೋಹನ್ ಕುಮಾರ್ ಅವರಿಗೆ, ಕರೊನಾ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ತೀವ್ರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಸಾವನಪ್ಪಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಸ್ವಗ್ರಾಮವಾದ ಕುಂಟನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಅಧಿಕಾರಿ ಹಿತ ಕಾಯಲು ಒತ್ತಾಯ: ಕೋವಿಡ್-19 ಹಿನ್ನಲೆ ಕರ್ಫ್ಯೂ ಘೋಷಿಸಲಾಗಿದ್ದರು, ಅಗತ್ಯ ವಸ್ತುಗಳ ಪೂರೈಸಲು ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಆದರೆ ಅವರ ಆರೋಗ್ಯ ಭದ್ರತೆ ಇಲ್ಲದೆ ಸಾವು ನೋವುಗಳು ಹೆಚ್ಚುತ್ತಿದ್ದು, ಸಂಬಂಧ ಪಟ್ಟವರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ತೋರಬೇಕಿದೆ ಎಂಬ ಒತ್ತಾಯ ಕೇಳಿ ಬಂದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….