ಬೆಂ.ಗ್ರಾ.ಜಿಲ್ಲೆ: ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಅವರು ಮೇ 10 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅವರನ್ನು ಬೆಳಿಗ್ಗೆ 11:00 ಗಂಟೆಗೆ ನೆಲಮಂಗಲ ತಾಲ್ಲೂಕಿಗೆ ಭೇಟಿ ನೀಡಿಲಿದ್ದು, ಮಧ್ಯಾಹ್ನ 1:00 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ರುದ್ರಭೂಮಿಗೆ ಭೇಟಿ ನೀಡಿದ ನಂತರ ಮಧ್ಯಾಹ್ನ 1:15 ಗಂಟೆಗೆ ಆಕಾಶ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2:45 ಗಂಟೆಗೆ ಹೊಸಕೋಟೆ ತಾಲ್ಲೂಕಿನಲ್ಲಿರುವ ಎಂವಿಜೆ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….