ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಬಿ.ವೈ.ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕೇಳಿ ಬರುತ್ತಿರುವ ವದಂತಿಗಳು ಸುಳ್ಳು…ಕರ್ನಾಟಕ ಬಿಜೆಪಿಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ವಿಜಯೇಂದ್ರ ಅವರು, ‘ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕೆಲವು ಕಾನೂನು ಸಮಸ್ಯೆಗಳನ್ನು ಬಗೆಹರಿಸಲು ನಾನು ದೆಹಲಿಯಲ್ಲಿದ್ದೇನೆ ಮತ್ತು ನಾಳೆ ಹಿಂತಿರುಗುತ್ತೇನೆ. ಕೆಲವರು ನಾಯಕತ್ವದ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಅದು ನಿಜವಲ್ಲ ಎಂದು  ಹೇಳಿದ್ದಾರೆ. ಇದೇ ವೇಳೆ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದೀರಾ ಎಂದು ಕೇಳಿದಾಗ, ಇದು ನಮ್ಮ ಪ್ರವಾಸದ ಭಾಗವಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ರಾಜ್ಯ ಕೋವಿಡ್‌ನಿಂದ ತತ್ತರಿಸಿ ಸೋಂಕು ನಿಯಂತ್ರಣ ತಪ್ಪಿರುವ ಈ ಸಂಕಷ್ಟ ಕಾಲದಲ್ಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿಗಳು ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ನಿನ್ನೆ ದೆಹಲಿಗೆ ತೆರಳಿ  ವರಿಷ್ಠರನ್ನು ಭೇಟಿ ಮಾಡಿರುವುದು ನಾಯಕತ್ವ ಬದಲಾವಣೆಯ ಮಾತುಗಳು ಎಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಪಂಚ ರಾಜ್ಯಗಳ ಚುನಾವಣಾ ಫಲಿ ತಾಂಶಗಳ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಹೇಳಿಕೆ ನೀಡುತ್ತಲೇ ಬಂದಿದ್ದರು. ಆದರೆ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಸಾರಾ ಸಗಟಾಗಿ ನಾಯಕತ್ವ ಬದಲಾವಣೆಯ ಪ್ರಸ್ತಾಪಗಳನ್ನು  ತಳ್ಳಿ ಹಾಕಿದ್ದರು. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬರುವ ಹೊತ್ತಿಗೆ ಕರ್ನಾಟಕ ಸೇರಿದಂತೆ ಇಡೀ ದೇಶ ಕೋವಿಡ್‌ನಿಂದ ತತ್ತರಿಸಿತ್ತು. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಮಾತು, ಚರ್ಚೆ ಎಲ್ಲವೂ ಪಕ್ಕಕ್ಕೆ ಸರಿದಿದ್ದವು. ಆದರೆ, ದಿಢೀರ್ ಎಂದು ನಿನ್ನೆ ಗೃಹ ಸಚಿವ ಬಸವರಾಜ ಬೊಮ್ಮಾಯಿ  ಮತ್ತು ಮುಖ್ಯಮಂತ್ರಿ ಪುತ್ರ ಬಿ.ವೈ ವಿಜಯೇಂದ್ರ ದೆಹಲಿಗೆ ತೆರಳಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯವಾಗಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಮತ್ತೆ ನಾಯಕತ್ವ ಬದಲಾವಣೆ ವಿಚಾರಕ್ಕೆ ಜೀವ ಬಂದಂತಾಗಿದೆ. ಕೋವಿಡ್ ನಿಯಂತ್ರಣದಲ್ಲಿನ ವೈಫಲ್ಯ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ವರಿಷ್ಠರಲ್ಲಿ ಅಸಮಾಧಾನ ಮೂಡಿಸಿದೆ. ಹೀಗಾಗಿ, ನಾಯಕತ್ವ ಬದಲಾವಣೆಯ ಬಗ್ಗೆ ವರಿಷ್ಠ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.  ಹಾಗಾಗಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರ ಮನವೊಲಿಸುವ ಕೆಲಸ ಮಾಡಿ ದ್ದಾರೆ ಎನ್ನಲಾಗಿದೆ. ಕೋವಿಡ್-೧೯ ಸಂಕಷ್ಟ ಕಾಲದಲ್ಲಿ ನಾಯಕತ್ವ ಬದಲಾ ವಣೆಯ ತೀರ್ಮಾನಗಳು ಬೇಡ ಸ್ವಲ್ಪದಿನ ಸಮಯ ಕೊಡಿ, ಎಲ್ಲವನ್ನೂ ಸರಿಪಡಿಸಿ ಕೊಳ್ಳುತ್ತೇವೆ.  ಒಳ್ಳೆಯ ಆಡಳಿತ ನೀಡು ತ್ತೇವೆ ಎಂದು ಈ ಇಬ್ಬರು ವರಿಷ್ಠರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಎಲ್ಲ ವನ್ನೂ ಸಮಾಧಾನದಿಂದ ಆಲಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಚರ್ಚಿಸಿ ನಂತರ ಸೂಕ್ತ ತೀರ್ಮಾನಕ್ಕೆ ಬರುವ  ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.

ವದಂತಿ ಬೋಗಸ್: ದೆಹಲಿ ನಾಯಕರು ನಾಯಕತ್ವ ಬದಲಾವಣೆಗೆ ಮನಸ್ಸು ಮಾಡಿದ್ದಾರೆ ಎಂಬ ವರದಿಗಳನ್ನು ಯಡಿಯೂರಪ್ಪ ಆಪ್ತ ಹಾಗು ಸಚಿವರು ಹಾಗೂ ಶಾಸಕರುಗಳು ತಳ್ಳಿ ಹಾಕಿದ್ದು, ಆ ವಿಚಾರ ಚರ್ಚೆಗೆ ಬಸವರಾಜ ಬೊಮ್ಮಾಯಿ ಮತ್ತು ವಿಜಯೇಂದ್ರ ದೆಹ ಲಿಗೆ ಹೋಗಿಲ್ಲ. ಆಮ್ಲಜನಕ ಪೂರೈಕೆ ಸಂಬಂಧ ರಾಜ್ಯ ಹೈಕೋರ್ಟಿನ  ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಗರಂ ಆಗಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ವಾಸ್ತವ ಸ್ಥಿತಿಯನ್ನು ವಿವರಿಸಲು ದೆಹ ಲಿಗೆ ತೆರಳಿದ್ದಾರೆ ಅಷ್ಟೆ. ನಾಯಕತ್ವ ಬದಲಾವಣೆ ಊಹಾ-ಪೋಹಾ ಎಂದು ಇವರುಗಳು ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿರುವ ಬೊಮ್ಮಾಯಿ ಸಹ ಈ ವದಂತಿಗಳನ್ನು ತಳ್ಳಿ ಹಾಕಿ ನಾವು ದೆಹಲಿಗೆ ಬಂದು ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರನ್ನು ಭೇಟಿ ಮಾಡಿರುವುದು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಎಲ್ಲ ನೆರವನ್ನು ಪಡೆಯಲು ಬಂದಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!