ಕೋವಿಡ್ ನಿಂದ ಮೃತರಾದವರ ಶವಸಂಸ್ಕಾರಕ್ಕೆ ಉಚಿತ ಅಂಬುಲೆನ್ಸ್ ಸೇವೆಗೆ ಆದೇಶ ಕಂದಾಯ ಸಚಿವ ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಮೃತಪಟ್ಟವರ ಶವಸಂಸ್ಕಾರಕ್ಕೆ ಆಯಾ ತಾಲ್ಲೂಕಿನಲ್ಲೇ ತಾತ್ಕಾಲಿಕವಾಗಿ ಚಿತಾಗಾರ ನಿರ್ಮಿಸಲಾಗುತ್ತಿದೆ ಎಂದು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಕೋರಮಂಗಲ ಕೆರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಚಿತಾಗಾರದ ಸ್ಥಳ ಪರಿಶೀಲನೆ ನಡೆಸಿ  ಮಾತನಾಡಿದ ಕಂದಾಯ ಸಚಿವರು ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಸೋಂಕು ಅನೇಕರನ್ನು ಬಲಿಪಡೆಯುತ್ತಿದೆ. ವಿಧಿವಿಧಾನದ ಮೂಲಕ ಶವಸಂಸ್ಕಾರ ನೆರವೇರಿಸಲು ಆಯಾ ಭಾಗದಲ್ಲೇ ಸರ್ಕಾರಿ ಜಮೀನುಗಳಲ್ಲಿ ತಾತ್ಕಾಲಿಕ ಚಿತಾಗಾರ ನಿರ್ಮಿಸಲಾಗುತ್ತಿದೆ ಎಂದರು. 

ಬೆಂಗಳೂರಿನ ತಾವರೆಕೆರೆ ಹಾಗೂ ಗಿಡ್ಡಪ್ಪನಹಳ್ಳಿಯಲ್ಲಿ ಈಗಾಗಲೇ ಚಿತಾಗಾರ ಆರಂಭವಾಗಿದೆ. ಅದೇ ಮಾದರಿಯಲ್ಲಿ ದೇವನಹಳ್ಳಿ ತಾಲ್ಲೂಕಿನಲ್ಲಿ  ಚಿತಾಗಾರ ನಿರ್ಮಾಣ ಅಂತಿಮ‌‌ ಹಂತದಲ್ಲಿದ್ದು, ಉಳಿದ ಮೂರು ತಾಲ್ಲೂಕುಗಳಲ್ಲಿ ಚಿತಾಗಾರ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ತಿಳಿಸಿದ ಸಚಿವರು ಇದೊಂದು ಭಾವನಾತ್ಮಕ ಪ್ರಕ್ರಿಯೆ ಆಗಿರುವುದರಿಂದ ಶವಸಂಸ್ಕಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಾರದು. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೃತಪಟ್ಟವರ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಪರದಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರು ನಗರದ ಸುತ್ತಮುತ್ತ ತಾತ್ಕಾಲಿಕ ಚಿತಾಗಾರಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಕಾರಣದಿಂದ ಮೃತರಾದವರ ಅಂತ್ಯಸಂಸ್ಕಾರಕ್ಕೆ ಕರೆತರುವ ಅಂಬುಲೆನ್ಸ್ ಗಳಲ್ಲಿ‌ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪ‌ ಕೇಳಿಬರುತ್ತಿರುವುದರಿಂದ ಇನ್ನುಂದೆ ಇಂಥ ಶವಸಂಸ್ಕಾರಕ್ಕೆ ಉಚಿತ ಅಂಬುಲೆನ್ಸ್ ಸೇವೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡ್ ವಿಚಾರದಲ್ಲಿ ಯಾರೇ ಆಗಲಿ ಅಕ್ರಮ ಎಸಗಿದರೆ, ಸೋಂಕಿತರು ಹಾಗೂ ಸಂಬಂಧಿಕರ ಜೊತೆ ಅನುಚಿತವಾಗಿ ವರ್ತಿಸಿದರೆ ನೋಟೀಸ್ ಸಹಾ ನೀಡದೆ, ಶಿಸ್ತುಕ್ರಮ ಕೈಗೊಳ್ಳಲಾಗುವುದು  ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಅನಿಲ್ ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]