ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 18 ವರ್ಷದಿಂದ 44 ವಯಸ್ಸಿನ ಸಾರ್ವಜನಿಕರಿಗೆ ಮೇ 10 ರಿಂದ ಕೋವಿಡ್ -19 ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತಿದಿನ 150 ಫಲಾನುಭವಿಗಳಿಗೆ ಲಸಿಕೆ ಹಾಕುವ ಯೋಜನೆ ರೂಪಿಸಲಾಗಿದ್ದು, 18 ವರ್ಷದಿಂದ 44 ವಯಸ್ಸಿನ ಸಾರ್ವಜನಿಕರು ಕೋವಿಡ್-19 ಲಸಿಕೆಗಾಗಿ ಆನ್‌ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
18 ವರ್ಷದಿಂದ 44 ವಯಸ್ಸಿನ ಸಾರ್ವಜನಿಕರು WWW.COwin.gov.in ವೆಬ್ ಸೈಟ್ ಮೂಲಕ ನೋಂದಾವಣೆ ಮಾಡಿಕೊಂಡು, ಆದ್ಯತೆಯುಳ್ಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೂಕ್ತ ದಿನಾಂಕ ಮತ್ತು ಸಮಯಕ್ಕೆ ಅಪಾಯಿಂಟ್ ಮೆಂಟ್ ಪಡೆದು, ಅದರ ಪ್ರತಿಯೊಂದಿಗೆ ಸಂಬಂಧಪಟ್ಟ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..