ಬೆಂ.ಗ್ರಾ.ಜಿಲ್ಲೆ: ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರು ಮೇ 11 ರಂದು ಕೋವಿಡ್ ಕೇರ್ ಕೇಂದ್ರ ಗಳಿಗೆ ಆಕ್ಸಿಜನ್ ಕಾನ್ಸೆನ್ಟ್ರೇಟರ್ ಮತ್ತು ಔಷಧೀಯ ಕಿಟ್ ಗಳನ್ನು ವಿತರಿಸಲಿದ್ದಾರೆ.
ಕಂದಾಯ ಸಚಿವರು ಮೇ 11 ರಂದು ಬೆಳಿಗ್ಗೆ 11:30 ಗಂಟೆಗೆ ದೇವನಹಳ್ಳಿ ತಾಲ್ಲೂಕು ಕಚೇರಿ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲ್ಲೂಕಿನ ಕೋವಿಡ್ ಕೇರ್ ಸೆಂಟರ್‌ಗಳಿಗೆ ತಲಾ 40 ಆಕ್ಸಿಜನ್ ಕಾನ್ಸೆನ್ಟ್ರೇಟರ್ (oxygen concentrators) ಮತ್ತು ಔಷಧೀಯ ಕಿಟ್ ಗಳನ್ನು ಸಂಬಂಧಪಟ್ಟ ಜಿಲ್ಲೆಯ ಶಾಸಕರುಗಳ ಉಪಸ್ಥಿತಿಯಲ್ಲಿ ಆಯಾ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…