ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಹಾಗೂ ದಾಬಸ್‌ಪೇಟೆ ಮತ್ತು ತ್ಯಾಮಗೊಂಡ್ಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಪ್ಪಂದದ ಆಧಾರ ಮೇರೆಗೆ ಕರ್ತವ್ಯ ನಿರ್ವಹಿಸಲು ಆಸಕ್ತ ಯುವ ವೈದ್ಯರು, ನಿವೃತ್ತ ವೈದ್ಯರು ಮತ್ತು ನರ್ಸ್ ಗಳಿಗೆ 2021ರ ಮೇ 13ರಂದು ನೇರ ಸಂದರ್ಶನ (ವಾಕ್ ಇನ್ ಇಂಟರ್ ವ್ಯೂ) ಅನ್ನು ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಸ್ವವಿವರದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಸ್ಥಳ, ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ ಮೊ.ಸಂ.: 9449843038 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….