ದೊಡ್ಡಬಳ್ಳಾಪುರ: ಲಾಕ್‍ಡೌನ್ ಎರಡನೇ ದಿನದವಾದ ಇಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದ 10 ಸಮಯ ಮೀರುತ್ತಿದ್ದಂತೆ, ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳ ಸಂಚಾರ ನಿಯಂತ್ರಿಸಲು ಪೊಲೀಸರು ರಸ್ತೆಗಿಳಿದಿದ್ದಾರೆ.
ನಗರದಲ್ಲಿ ಸಬ್ ಇನ್ಸ್ಪೆಕ್ಟರ್ ಬಸವನಗೌಡ ಪಾಟೀಲ್ ಸಿಬ್ಬಂದಿಯೊಂದಿಗೆ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು, ಎಚ್ಚರಿಕೆ ನೀಡಿ ಕಳುಹಿಸಿದರೆ. ಅಗತ್ಯ ಸೇವೆ ಒದಗಿಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಿ, ತಪಾಸಣೆ ಮಾಡಿ ಕಳಿಸುತ್ತಿದ್ದಾರೆ.
ಬೆಳಿಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದ ಕಾರಣ, ಇಂದು ಮಾರುಕಟ್ಟೆಯಲ್ಲಿ ಹೆಚ್ಚಿನ ಜನ ಖರೀದಿಗೆ ಬಂದಿದ್ದರು. ನಿಗದಿತ ಸಮಯ ಮುಗಿದಿದ್ದು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಲಾರಂಭಿಸಿದ್ದಾರೆ.
ಸೋಮವಾರ ಅನಗತ್ಯವಾಗಿ ರಸ್ತೆಗಿಳಿದಿದ್ದ 100ಕ್ಕು ವಾಹನಗಳನ್ನು ತಾಲೂಕಿನಲ್ಲಿ ವಿವಿಧೆಡೆ ಪೊಲೀಸರು ಸೀಸ್ ಮಾಡಿದ್ದನ್ನು ನೆನಸಿಕೊಳ್ಳಬಹುದಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…