ದೊಡ್ಡಬಳ್ಳಾಪುರ: ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕ ನಾಗೇಶ್ (45ವರ್ಷ) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ತಾಲೂಕಿನ ಚಿಕ್ಕಮಂಕಲಾಳ ನಿವಾಸಿಯಾಗಿದ್ದ ನಾಗೇಶ್, ಕೋವಿಡ್ ಸೋಂಕಿಗೆ ಒಳಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಸಾವನಪ್ಪಿದ್ದಾರೆ
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಕುರಿತು ಸಿದ್ದತೆ ನಡೆದಿದೆ ಎಂದು ಮೃತ ಶಿಕ್ಷಕ ನಾಗೇಶ್ ಗೆಳೆಯರು ಹರಿತಲೇಖನಿಗೆ ತಿಳಿಸಿದ್ದಾರೆ.
ಶಿಕ್ಷಕ ನಾಗೇಶ್ ತಾಲೂಕು ಶಿಕ್ಷಕರ ಸಂಘದ ಪ್ರತಿನಿಧಿಯಾಗಿ, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಇವರ ಅಗಲಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸರ್ಕಾರಿ ನೌಕರರ ಸಂಘ ಪದಾಧಿಕಾರಿಗಳು ಹಾಗೂ ಬಿಇಒ ಕಚೇರಿಯ ಸಿಬ್ಬಂದಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…