ಮೇಕ್‌ಶಿಫ್ಟ್ ಆಸ್ಪತ್ರೆ ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆಗೆ ವರದಾನ: ಕಂದಾಯ ಸಚಿವ ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ 100 ಆಕ್ಸಿಜನೇಟೆಡ್ ಹಾಸಿಗೆಗಳ ಮೇಕ್‌ಶಿಫ್ಟ್ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು, ಕೋವಿಡ್ ಮೂರನೇ ಅಲೆ ತಡೆಯಲು ಅನುಕೂಲಕರವಾಗಲಿದೆ ಹಾಗೂ ಈ ಭಾಗದ ಜನರಿಗೆ ಆಸ್ಪತ್ರೆಯು ವರದಾನವಾಗಲಿದೆ ಎಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ತಿಳಿಸಿದರು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ 100 ಆಕ್ಸಿಜನೇಟೆಡ್ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಲೆನೆವೊ, ಗೋಲ್ಡ್‌ಮ್ಯಾನ್ ಸ್ಯಾಚಸ್ ಕಂಪನಿಗಳು ಸಿ.ಎಸ್.ಆರ್. ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು ರೂ. 4 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದರು. ಮೇಕ್‌ಶಿಫ್ಟ್ ಆಸ್ಪತ್ರೆಯಲ್ಲಿ, 70 ಆಕ್ಸಿಜನ್ ಬೆಡ್‌ಗಳು, 20 ಐ.ಸಿ.ಯು.(ತೀವ್ರ ನಿಗಾ ಘಟಕ) ಬೆಡ್‌ಗಳು, 10 ವೆಂಟಿಲೇಟರ್ ಬೆಡ್‌ಗಳು ಹಾಗೂ 2 ಕೆ.ಎಲ್. ಆಕ್ಸಿಜನ್ ಜನರೇಟರ್ ವ್ಯವಸ್ಥೆ ಹೊಂದಿರಲಿದ್ದು, ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್, ದೊಡ್ಡಬಳ್ಳಾಪುರ ಇವರು ನಿರ್ವಹಿಸಲಿದ್ದಾರೆ ಎಂದು ಹೇಳಿದರಲ್ಲದೆ, ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ, ಭಾರತ ಸರ್ಕಾರ, ಅಮೇರಿಕನ್ ಇಂಡಿಯಾ ಫೌಂಡೇಶನ್ ಮತ್ತು ಯು.ಎನ್.ಡಿ.ಪಿ(UNDP) ಸಂಸ್ಥೆಗೆ ವಹಿಸಲಾಗಿದೆ ಎಂದು ತಿಳಿಸಿದರು. 

ಜಿಲ್ಲೆಯಲ್ಲಿ “ವೈದ್ಯರ ನಡೆ, ಹಳ್ಳಿ ಕಡೆ” ಎಂಬ ವಿನೂತನ ಕಾರ್ಯಕ್ರಮದಡಿಯಲ್ಲಿ ಪ್ರತಿ ತಾಲ್ಲೂಕಿಗೂ 15 ಮೊಬೈಲ್ ಕ್ಲಿನಿಕ್‌ಗಳ ಮೂಲಕ ಒಂದು ವಾರದಲ್ಲಿ ಹಳ್ಳಿಯೊಂದಕ್ಕೆ ಎರಡು ಬಾರಿ ಭೇಟಿ ನೀಡಿ, ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಇದುವರಿಗೆ ಒಟ್ಟು 90,218 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. 16,045 ಜನರಿಗೆ RAT ಮತ್ತು ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನಡೆಸಲಾಗಿದ್ದು, 1908 ಮಂದಿಗೆ ಕೊರೋನಾ ಸೋಂಕು ದೃಡಪಟ್ಟಿದ್ದು, ಇದರಿಂದ ಸೋಂಕು ಹೆಚ್ಚಾಗಿ ಪಸರಿಸದಂತೆ ತಡೆಯುವ ಕೆಲಸ ಮಾಡಲಾಗುತ್ತಿದೆ ಎಂದ ಅವರು ಜಿಲ್ಲಾಧಿಕಾರಿ ಹಾಗೂ ವೈದ್ಯರ ತಂಡಗಳಿಗೆ ಅಭಿನಂದನೆ ತಿಳಿಸಿದರು. 

ತಜ್ಞರ ವರದಿ ಆಧರಿಸಿ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರಲ್ಲದೆ, ಲಾಕ್‌ಡೌನ್ ಮಾಡಿದ್ದರ ಫಲವಾಗಿ ಕೋವಿಡ್ ಸೋಂಕು ಪಸರಿಕೆ ಪ್ರಮಾಣ ಕಡಿಮೆಯಾಗಿದೆ ಎಂದರು.

ಮುಂದಿನ ದಿನಗಳಲ್ಲಿಯೂ ಕೋವಿಡ್ ಸೋಂಕು ಇನ್ನಷ್ಟೂ ಕಡಿಮೆಯಾದರೆ ಹಂತ ಹಂತವಾಗಿ ಕೆಲವೊಂದು ವಲಯಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಬಹುದಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು. 

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮೇಕ್‌ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸುತ್ತಿರುವುದರಿಂದ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಬಹಳ ಅನುಕೂಲವಾಗಲಿದ್ದು, ತಾಲ್ಲೂಕು ಆಸ್ಪತ್ರೆಯಲ್ಲಿಯೇ ಸಿಟಿ ಸ್ಕ್ಯಾನಿಂಗ್ ಯಂತ್ರ ಅಳವಡಿಸಲು ವಿಧಾನಸಭಾ ಸದಸ್ಯರ ಅನುದಾನದಿಂದ 75 ಲಕ್ಷ ರೂಪಾಯಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗುವುದು, ಇದರಿಂದ ಬಡವರಿಗೆ ಅನುಕೂಲವಾಗಲಿದೆ ಎಂದರು. 

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ರವಿ, ರಮೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಉಪ ವಿಭಾಗಾಧಿಕಾರಿ ಅರುಳ್‌‌‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಡಿವೈಎಸ್ಪಿ ಟಿ.ರಂಗಪ್ಪ, ತಹಶೀಲ್ದಾರ್ ಟಿ.ಎಸ್. ಶಿವರಾಜ್, ತಾಲ್ಲೂಕು ಅರೊಗ್ಯಾಧಿಕಾರಿ ಡಾ.ಪರಮೇಶ್ವರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಟಫೆ ಕಂಪನಿ ವತಿಯಿಂದ ಜಿಲ್ಲಾಡಳಿತಕ್ಕೆ ಹತ್ತು ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಹಸ್ತಾಂತರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]