ದೊಡ್ಡಬಳ್ಳಾಪುರ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಲಾಕ್‍ಡೌನ್ ಘೋಷಿಸಲಾಗಿರುವ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ರಾಜಘಟ್ಟ ಗ್ರಾಮದಲ್ಲಿ 28 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಮೂರು ಮಂದಿ ಸಾವನಪ್ಪಿದ್ದಾರೆ. ಈ ಹಿನ್ನಲೆ ಸೋಂಕು ಹರಡುವುದನ್ನು ತಡೆಗಟ್ಟಲು ಗ್ರಾಮ ಪಂಚಾಯಿತಿ ಆಡಳಿತ ಈ ನಿರ್ಣಯವನ್ನು ಕೈಗೊಂಡಿದ್ದು, ಇಂದಿನಿಂದ ಜೂ.7ರ ವರೆಗೆ ರಾಜಘಟ್ಟ ಗ್ರಾಮವನ್ನು ಲಾಕ್‍ಡೌನ್ ಮಾಡಲಾಗುತ್ತಿದೆ. ಅಲ್ಲದೆ ಸೋಂಕು ತೀವ್ರವಾಗಿರುವ ವ್ಯಾಪ್ತಿಯನ್ನು ಸೀಲ್ಡೌನ್ ಮಾಡಲಾಗಿದೆ.
ಅಗತ್ಯ ವಸ್ತುಗಳ ಖರೀದಿಗೆ ಗುರುವಾರ ಬೆಳಗ್ಗೆ 6ರಿಂದ 10ರ ವರೆಗೆ ಲಾಕ್‍ಡೌನ್ ಬಿಡುವು ನೀಡಲಾಗುತ್ತಿದೆ.
ಗ್ರಾಮದಲ್ಲಿ ಸೋಂಕು ತೀವ್ರವಾಗಿರುವ ಹಿನ್ನಲೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸೋಂಕು ನಿಯಂತ್ರಣ ಕ್ರಮಗಳ ಕುರಿತು ಮಾತುಕತೆ ನಡೆಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…