ದೊಡ್ಡಬಳ್ಳಾಪುರ: ಕೋವಿಡ್-19 ತುರ್ತು ಚಿಕಿತ್ಸೆಗಾಗಿ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ, ತಾಲೂಕಿನ ಇಸ್ತೂರು ಕೋವಿಡ್ ಕೇರ್ ಸೆಂಟರ್ ಗೆ ಆಂಬ್ಯುಲೆನ್ಸ್ ನೆರವನ್ನು ನೀಡಲಾಯಿತು.
ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ತಾಲೂಕಿನಲ್ಲಿ ಮಹಾಮಾರಿ ಕರೊನಾ ತೀವ್ರವಾಗಿ ಕಾಡಿ, ಪ್ರಸ್ತುತ ಇಳಿಮುಖ ಕಂಡಿದೆ, ಆದಾಗ್ಯೂ ಸಾರ್ವಜನಿಕರು ಮತ್ತಷ್ಟು ದಿನಗಳ ಕಾಲ ಮುಂಜಾಗ್ರತೆ ವಹಿಸಬೇಕಿದೆ.
ಇದೇ ವೇಳೆ ತಾಲೂಕಿನ ಸಂಕಷ್ಟದ ಸಮಯದಲ್ಲಿ ನೆರವಾಗಿರುವ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಕಾರ್ಯ ಪ್ರಶಂಸನೀಯ ಎಂದರು.
ತಹಶಿಲ್ದಾರ್ ಟಿ.ಎಸ್.ಶಿವರಾಜ್, ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಹೆಚ್ಪಿ ಮಂಜುನಾಥ್, ತಾಪಂ ಮಾಜಿ ಸದಸ್ಯ ಹಸನ್ ಘಟ್ಟ ರವಿ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….