ದೊಡ್ಡಬಳ್ಳಾಪುರ: ತಾಲೂಕಿನ ಕಂಟನಕುಂಟೆಯಲ್ಲಿ ನಿರ್ಮಿಸಲಾಗುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ 3 ಹಂತಗಳಲ್ಲಿ ಕೈಗಾರಿಕಾ ಪ್ರದೇಶದ ವಿಸ್ತರಣೆಯಾದರೂ ಸಹ ಇಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ ಸ್ಥಾಪನೆಯಾಗಿರಲಿಲ್ಲ. 2013ರಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಈಗ ಈ ಸಂಸ್ಥೆಯನ್ನು ಮೇಲ್ದರ್ಜೆಗೇರಿಸುತ್ತಿದ್ದು, 85 ಲಕ್ಷ ರೂ ವೆಚ್ಚದಲ್ಲಿ ಕೈಗಾರಿಕಾ ಶೆಡ್ ಹಾಗು 1.5 ಕೋಟಿರೂ ವೆಚ್ಚದಲ್ಲಿ ಕೈಗಾರಿಕಾ ತರಬೇತಿಗೆ ಪೂರಕವಾದ ಆಧುನಿಕ ಯಂತ್ರಗಳನ್ನು ಅಳವಡಿಸಲಾಗುವುದು. ಇನ್ನು 3 ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ರವಿ, ಕಂಟನಕುಂಟೆ ಗ್ರಾ.ಪಂ ಅಧ್ಯಕ್ಷೆ ಶೋಭಾ ರಾಜಗೋಪಾಲ್, ಉಪಾಧ್ಯಕ್ಷ ನಾಗರಾಜ್, ಸದಸ್ಯರಾದ ರಾಮಚಂದ್ರ ರೆಡ್ಡಿ, ಲಕ್ಷ್ಮೀಕಾಂತ್, ಯಲ್ಲಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಐಟಿಐ ಕಾಲೇಜಿನ ಪ್ರಾಂಶುಪಾಲ ಕೆ.ಚಂದ್ರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….