ದೊಡ್ಡಬಳ್ಳಾಪುರ: ಕೋವಿಡ್ ತಪಾಸಣೆ ವೇಳೆ ಕರೊನಾ ಸೋಂಕು ತೀವ್ರವಾಗಿ ದೃಢ ಪಟ್ಟಿರುವ ಹಿನ್ನಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಆರೂಢಿಯ ಸರ್ಕಾರಿ ಆಸ್ಪತ್ರೆಯನ್ನು ಇಂದಿನಿಂದ 48ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ಈ ಕುರಿತು ಆರೋಗ್ಯ ಇಲಾಖೆ ಮೂಲಗಳು ಹರಿತಲೇಖನಿಗೆ ಮಾಹಿತಿ ನೀಡಿದ್ದು, ಸತತ ಮೂರು ದಿನಗಳ ಅವಧಿಯಲ್ಲಿ ಆಸ್ಪತ್ರೆಯಲ್ಲಿ ನಡೆಸಲಾದ ಕೋವಿಡ್ ಸೋಂಕು ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದೃಢಪಟ್ಟಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡಿಸಿ ಸೀಲ್ ಡೌನ್ ಮಾಡಲಾಗುತ್ತಿದೆ.
ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲವಾಗಿದ್ದು, ಕೇವಲ ಸೋಂಕು ಹರಡುವುದನ್ನು ತಡೆಗಟ್ಟಲು ಮಾತ್ರ ಈ ಕ್ರಮಕೈಗೊಳ್ಳಲಾಗಿದೆ. ಗುರುವಾರದಿಂದ ಆಸ್ಪತ್ರೆ ಕಾರ್ಯನಿರ್ವಹಿಸಲಿದ್ದು, ಗುರುವಾರದ ಲಸಿಕೆ ಕಾರ್ಯ ಎಂದಿನಂತೆ ನಡೆಯಲಿದೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….