ದೊಡ್ಡಬಳ್ಳಾಪುರ: ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲೇಶ್ (46ವರ್ಷ) ಅನಾರೋಗ್ಯದಿಂದ ನಿಧನಹೊಂದಿದ್ದಾರೆ.
ತಾಲೂಕಿನ ಹಣಬೆ ಗ್ರಾಮದವರಾದ ಮಲ್ಲೇಶ್ ಕೋವಿಡ್ ಸೋಂಕಿಗೆ ಒಳಗಾಗಿ ಕಳೆದ ರಾತ್ರಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ
ಮೃತರು ಮಡದಿ, ಹಾಗೂ ಪುತ್ರಿಯನ್ನು ಅಗಲಿದ್ದು, ಅಂತ್ಯಕ್ರಿಯೆ ಹಣಬೆ ಗ್ರಾಮದಲ್ಲಿ ಕೋವಿಡ್-19 ನಿಯಮಾನುಸಾರ ನೆರವೇರಲಿದೆ.
ಮಲ್ಲೇಶ್ ಅವರ ಅಕಾಲಿಕ ನಿಧನಕ್ಕೆ ಆರ್.ಜಾಲಪ್ಪ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….