ದೊಡ್ಡಬಳ್ಳಾಪುರ: ತಾಲೂಕಿನ ನಗರ ಪೊಲೀಸ್ ಠಾಣೆ ಹಾಗೂ ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ವೆಂಕಟೇಶ್, ಬಸವನಗೌಡ ಕೆ.ಪಾಟೀಲ್ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಗಳಾನ್ನಾಗಿಸಿ ವರ್ಗಾಯಿಸಿದೆ.
ಮಂಗಳವಾರ ಬಿಡುಗಡೆ ಮಾಡಿರುವ ಆದೇಶ ಪತ್ರದಲ್ಲಿ 60 ಸಬ್ ಇನ್ಸ್ಪೆಕ್ಟರ್ ಗಳನ್ನು ಇನ್ಸ್ಪೆಕ್ಟರ್ ಗಳನ್ನಾಗಿ ಮುಂಬಡ್ತಿ ನೀಡಿ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರ ಪರವಾಗಿ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ.
ಇದೇ ವೇಳೆ ದೊಡ್ಡಬಳ್ಳಾಪುರ ನಗರ ಸಬ್ ಇನ್ಸ್ಪೆಕ್ಟರ್ ಆಗಿದ್ದ ಕೆ.ವೆಂಕಟೇಶ್ ಅವರನ್ನು ಡಿಎಸ್ ಬಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಹಾಗೂ ಹೊಸಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಆಗಿದ್ದ ಬಸವನಗೌಡ ಕೆ.ಪಾಟೀಲ್ ಅವರನ್ನು ಕೇಂದ್ರ ಐಜಿಪಿ ಕಚೇರಿಗೆ ನಿಯುಕ್ತಿಗೊಳಿಸಿ ಆದೇಶಿಸಿದೆ.
ಇದೇ ವೇಳೆ ವಿಶ್ವನಾಥಪುರದ ರಘು.ವಿ ಅವರನ್ನು ಸಹ ಮುಂಬಡ್ತಿ ನೀಡಿ, ಡಿಸಿಆರ್ ಇ ಕೋಲಾರಕ್ಕೆ ನಿಯುಕ್ತಿಗೊಳಿಸಲಾಗಿದೆ.
ಮುಂಬಡ್ತಿ ಪಡೆದವರನ್ನು ತಕ್ಷಣದಿಂದ ಕರ್ತವ್ಯದಿಂದ ಬಿಡುಗಡೆ ಗೊಳಿಸಿ, ಹೊಸ ಹುದ್ದೆಗೆ ವರದಿ ಮಾಡುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿದೆ.
ನೂತನವಾಗಿ ಇನ್ಸ್ಪೆಕ್ಟರ್ ಗಳಾಗಿ ಪದೋನ್ನತಿ ಹೊಂದಿದ ಸಿಬ್ಬಂದಿಗಳನ್ನು ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಅಭಿನಂದನೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….