ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷರಾಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ.
ಇದರ ಬೆನ್ನಲ್ಲೆ ಡಬ್ಲ್ಯುಎಚ್‌ಒ ಕಾರ್ಯನಿರ್ವಾಹಕ ಮಂಡಳಿಯ ನೂತನ ಅಧ್ಯಕ್ಷರಾಗಿ ಕೀನ್ಯಾದ ಆರೋಗ್ಯ ಸಚಿವಾಲಯದ ಆರೋಗ್ಯ ಕಾರ್ಯಕಾರಿ ಮಹಾನಿರ್ದೇಶಕ ಡಾ. ಪ್ಯಾಟ್ರಿಕ್ ಅಮೋತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಡಬ್ಲ್ಯುಎಚ್‌ಒ ಕಾರ್ಯನಿರ್ವಾಹಕ ಮಂಡಳಿಯ 149 ನೇ ಅಧಿವೇಶನದಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ತಿಳಿಸಿದ್ದಾರೆ.(ANI)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….