ಬೆಂಗಳೂರು: ತಂತ್ರಜ್ಞಾನ ದೈತ್ಯ ಎಂದು ಕರೆಯಲ್ಪಡುವ ಗೂಗಲ್ನ ಸರ್ಚ್ ಎಂಜಿನ್‌ನಲ್ಲಿ ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ಬರುತ್ತಿದೆ. ಆ ಮೂಲಕ ಕನ್ನಡ ಭಾಷೆಗೆ, ಕನ್ನಡಿಗರಿಗೆ ಅವಮಾನ ಮಾಡಲಾಗಿದೆ.
ಕನ್ನಡಿಗರು ವಿಶಾಲ ಹೃದಯದವರು. ಯಾವುದೇ ಭಾಷೆಯವರು ಕರ್ನಾಟಕಕ್ಕೆ ಬಂದರೂ ಅವರದೇ ಭಾಷೆಯಲ್ಲಿ ಮಾತನಾಡುತ್ತಾ ಅವರನ್ನು ನಮ್ಮವರೇ ಎಂದು ಬರಮಾಡಿಕೊಳ್ಳವ ಮನಸ್ಥಿತಿ ಕರ್ನಾಟಕದಲ್ಲಿ ತಳವೂರಿ ಬಿಟ್ಟಿದೆ.
ಅತ್ಯಂತ ಕೆಟ್ಟ ಭಾಷೆ ಎಂದು ಗೂಗಲ್ ನಲ್ಲಿ ಕನ್ನಡಕ್ಕೆ ಅಪಮಾನ ಮಾಡಿರುವುದಕ್ಕೆ ಇದೀಗ ಇನ್ಸ್ಟಾಗ್ರಾಂ, ಫೇಸ್ಬುಕ್ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಕೋಟ್ಯಂತರ ಜನರು ಮಾತನಾಡುವ ಕನ್ನಡ ಭಾಷೆಯನ್ನು ಕೊಳಕು ಭಾಷೆ ಎಂದಿರುವುದಕ್ಕೆ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ.
ಗೂಗಲ್ನಂತಹ ದೊಡ್ಡ ಸಂಸ್ಥೆ ಕನ್ನಡ ಭಾಷೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಹಾಗೂ ಈ ಕೂಡಲೇ ಪ್ರಮಾದವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒತ್ತಾಯಿಸುತ್ತಿದ್ದಾರೆ. ಅದ ಪ್ರಮಾದದಿಂದ ಹೆಚ್ಚೆತ್ತ ಗೂಗಲ್ ಸರ್ಚ್ ಪೇಜ್ ಡಿಲೀಟ್ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….