ಬೆಂಗಳೂರು: ಜೂನ್.14ರವರೆಗೆ ಲಾಕ್‍ಡೌನ್ ಜಾರಿ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಲಾಕ್‍ಡೌನ್ ಕುರಿತಂತೆ ಸಿಎಂ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದು, ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ನಿಂದಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಮತ್ತಷ್ಟು ಹಿನ್ನೆಲೆ ಲಾಕ್ಡೌನ್ನ್ನು ಮತ್ತೊಂದು ವಾರ ಮುಂದುವರೆಸಲು ನಿರ್ಧರಿಸಲಾಗಿದೆ ಎಂದರು.
ಇದೇ ವೇಳೆ ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿರುವ ಜನರಿಗೆ ಸಿಎಂ ಬಿಎಸ್ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಸಿಎಂ ಅವರು ಇಂದು ಎರಡನೇ ಬಾರಿಗೆ 500 ಕೋಟಿ ರೂಪಾಯಿ ವೆಚ್ಚದ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿದರು.
ವಿವರ: ಪವರ್ ಲೂಮ್ ನೇಕಾರರಿಗೆ ತಲಾ 3 ಸಾವಿರ, ಚಲನಚಿತ್ರ ಮತ್ತು ದೂರದರ್ಶನ ಮಾಧ್ಯಮದಲ್ಲಿನ ಅಸಂಘಟಿತ ಕಾರ್ಮಿಕರಿಗೆ ತಲಾ 3 ಸಾವಿರ, ಆಶಾ ಕಾರ್ಯಕರ್ತರಿಗೆ 3 ಸಾವಿರ ರೂ, ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ, ಮೀನುಗಾರರಿಗೆ ತಲಾ 3 ಸಾವಿರ, ಮುಜರಾಯಿ ದೇಗುಲದ ಅರ್ಚಕರು, ನೌಕರರಿಗೆ 3 ಸಾವಿರ, ಮಗ್ಗಗಳ ಕಾರ್ಮಿಕರಿಗೆ ತಲಾ 3 ಸಾವಿರ, ಅನುದಾನ ಅನುದಾನ ರಹಿತ ಶಿಕ್ಷಕರಿಗೆ ತಲಾ ರೂ 5 ಸಾವಿರದಂತೆ ಪರಿಹಾರ ಘೋಷಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….