ಬೆಂ.ಗ್ರಾ.ಜಿಲ್ಲೆ: ರಾಜ್ಯ ಕಾರ್ಯಕಾರಿ ಸಮಿತಿಯು ರಾಜ್ಯದಲ್ಲಿ ಕೋವಿಡ್-19 ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಜಿಲ್ಲೆಯ ಜನತೆ ಕಡ್ಡಾಯವಾಗಿ ಪಾಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.
ಅರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹರಡುವಿಕೆಯು ಸ್ಥಿರವಾಗಿದೆ. ಆದಾಗ್ಯೂ, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಿನ ಮಟ್ಟದಲ್ಲಿದ್ದು, ಇದು ಕಟ್ಟುನಿಟ್ಟಾದ ನಿಯಂತ್ರಣ ಕ್ರಮಗಳ ಅನುಷ್ಠಾನದೊಂದಿಗೆ ಮುಂದಿನ ದಿನಗಳಲ್ಲಿ ಕಡಿಮೆಯಾಗುವ ಸಾಧ್ಯತೆಯಿರುವುದರಿಂದ,
ಆರೋಗ್ಯ ತಜ್ಞರ ಅಭಿಪ್ರಾಯಗಳನ್ನು ತೆಗೆದುಕೊಂಡ ನಂತರ, ರಾಜ್ಯದಲ್ಲಿ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿವಾರಿಸಲು, ಹಂತ ಹಂತವಾಗಿ ಚಟುವಟಿಕೆಗಳನ್ನು ತೆರೆಯುವ ಮೊದಲು ಅಸ್ತಿತ್ವದಲ್ಲಿರುವ ಕಾರ್ಯತಂತ್ರವನ್ನು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಸುವುದು ಕಡ್ಡಾಯವಾಗಿದೆ.
ಪರಿಷ್ಕೃತ ಮಾರ್ಗಸೂಚಿಗಳು 2021ರ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದ್ದು, ಜೂನ್ 7 ರಿಂದ ಕಂಟೈನ್‌ಮೆಂಟ್ ವಲಯದ ಹೊರಗೆ ಹೆಚ್ಚುವರಿ ಚಟುವಟಿಕೆಗೆ ಅನುಮತಿ ನೀಡಲಾಗಿದೆ.
ರಫ್ತುಗಳಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ಎಲ್ಲಾ ಘಟಕಗಳು ಅಥವಾ ಸಂಸ್ಥೆಗಳು ಶೇ. 30% ರಷ್ಟು ಸಿಬ್ಬಂದಿ ಸಾಮರ್ಥ್ಯದ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಅನುಮತಿಸಲಾದ ಘಟಕಗಳು ಅಥವಾ ಸಂಸ್ಥೆಗಳು 1000 ಕ್ಕಿಂತ ಹೆಚ್ಚು ಜನರನ್ನು ನೇಮಿಸಿಕೊಳ್ಳುವ ಅಂತಹ ಎಲ್ಲಾ ಘಟಕಗಳು ವಾರಕ್ಕೆ ಎರಡು ಬಾರಿ ಕನಿಷ್ಠ 10% ಉದ್ಯೋಗಿಗಳಿಗೆ ಕೋವಿಡ್-19 ಪರೀಕ್ಷೆಯನ್ನು ಮಾಡಬೇಕು.
ಗಾರ್ಮೆಂಟ್ಸ್ ರಫ್ತು ಘಟಕಗಳಿಗೆ ಪ್ರತ್ಯೇಕ ಎಸ್‌ಒಪಿ ಗಳನ್ನು ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….