ಬೆಂಗಳೂರು: ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿಯೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈ ವರ್ಷ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಈಗಾಗಲೇ ಕೇಂದ್ರ ಮಟ್ಟದ ಸಿಬಿಎಸ್ ಇ ಮತ್ತು ಐಸಿಎಸ್‌ಇಯ 10ನೇ ಹಾಗೂ 12ನೇ ತರಗತಿ ಪರೀಕ್ಷೆಗಳು ರದ್ದಾಗಿದೆ. ರಾಜ್ಯದಲ್ಲಿ ನಡೆಯುವ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳ ಬಗ್ಗೆಯೂ ಗೊಂದಲಗಳು ತಲೆದೋರಿದ್ದರಿಂದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಈ ಹಿಂದಿನ ಶಿಕ್ಷಣ ಸಚಿವರು, ಪರಿಷತ್ ಸದಸ್ಯರು, ಅಧಿಕಾರಿಗಳು ಪೋಷಕರು, ಮಕ್ಕಳ ಅಭಿಪ್ರಾಯ ಪಡೆದುಕೊಂಡು ನಿರ್ಧಾರ ಮಾಡಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಆದರೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದು ಮಾಡದೆ ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು. ಅಲ್ಲದೇ ಜುಲೈ 3 ನೇ ವಾರದಲ್ಲಿ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.
ಈ ಕುರಿತು ವಿವರಣೆ ನೀಡಿರುವ ಅವರು, ಎಸ್ಎಸ್ಎಲ್ಸಿ ಪರೀಕ್ಷೆ ವಿಚಾರದಲ್ಲೂ ಬೇಕು, ಬೇಡ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ, ಆದರೆ ನಾವು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದು ಮಾಡಲಾಗುವುದಿಲ್ಲ. ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು, ಭಾಷೆಗಳ ವಿಷಯದ ಪರೀಕ್ಷೆ ಮತ್ತೊಂದು ಹಂತದಲ್ಲಿ. ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಸೇರಿದಂತೆ ಒಂದು ಪರೀಕ್ಷೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….