ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಹಲವೆಡೆ ಕಳೆದ ಮೂರು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ.
ಮಧುರೆ, ದೊಡ್ಡಬೆಳವಂಗಲ, ಸಾಸಲು ಹೋಬಳಿಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆದರೆ ತೂಬಗೆರೆ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಿದೆ.
ವಿದ್ಯುತ್ ಕಡಿತ: ಮಳೆಯಿಂದಾಗಿ ಮರಗಳು ವಿದ್ಯುತ್ ಕಂಬದ ಮೇಲೆ ಉರುಳಿಬೀಳುತ್ತಿರುವ ಕಾರಣ ಕೆಲವೆಡೆ ವಿದ್ಯುತ್ ಕಡಿತ ಉಂಟಾಗುತ್ತಿದೆ. ಕಳೆದ ಎರಡು ದಿನಗಳಿಂದ ಸಾಸಲು ಹೋಬಳಿ ಸೇರಿದಂತೆ ಗ್ರಾಮಾಂತರ ಪ್ರದೇಶದ ಹಲವೆಡೆ, ರಾತ್ರಿಯ ವೇಳೆ ವಿದ್ಯುತ್ ಕಡಿದಿಂದ ಸಾರ್ವಜನಿಕರು ಪರದಾಡುವಂತಾಗಿದೆ.
ಮಳೆ ವರದಿ ಅಲಭ್ಯ: ತಾಲೂಕಿನಲ್ಲಿ ಉತ್ತಮವಾಗಿ ಸುರಿಯುತ್ತಿದೆ. ಆದರೆ ಮಳೆ ವರದಿಯ ಅಂಕಿ ಅಂಶ ಹವಾಮಾನ ಇಲಾಖೆ ತಾಂತ್ರಿಕ ಕಾರಣಗಳಿಂದ ನೀಡದ ಕಾರಣ ಲಭ್ಯವಾಗುತ್ತಿಲ್ಲವೆಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ರೂಪ ಹರಿತಲೇಖನಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….