ದೊಡ್ಡಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆಯನ್ನು ದೊಡ್ಡಬಳ್ಳಾಪುರ ತಾಲೂಕು ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ವಿಶಿಷ್ಟವಾಗಿ ಆಚರಿಸಿ ಗಮನ ಸೆಳೆದಿದ್ದಾರೆ.
ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ, ಕರೊನಾ ಸೋಂಕಿನಿಂದ ಗುಣಮುಖರಾದ ವೃದ್ದರೋರ್ವರಿಂದ ಸಸಿ ನೆಡಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆ ವಿಶಿಷ್ಟವಾಗಿ ಆಚರಿಸಿ, ಮಹಾಮಾರಿ ಕರೊನಾದಿಂದ ಗುಣಮುಖರಾದ ವೃದ್ದರಿಗೆ ಶುಭಕೋರಿದರು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಡಾ.ಚನ್ನಕೇಶವ, ಡಾ.ಮಂಜುನಾಥ್, ಡಾ.ಗಿರೀಶ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….