ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಉಚಿತ ಆಂಬ್ಯುಲೆನ್ಸ್ ಹಾಗೂ ಆಹಾರ ಮತ್ತು ಔಷಧಿ ಸಾಮಗ್ರಿಗಳ ಕಿಟ್ ವಿತರಣೆ / ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯೆಂದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

ದೊಡ್ಡಬಳ್ಳಾಪುರ: ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗದಂತೆ ಸರ್ಕಾರವೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಜನರಿಗೆ ನೀಡುತ್ತಿದ್ದು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥನಾರಾಯಣ ಅವರು ತಿಳಿಸಿದರು.ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಇಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್(ರಿ.) ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆಂಬ್ಯುಲೆನ್ಸ್ ಹಾಗೂ ಆಹಾರ ಮತ್ತು ಔಷಧಿ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿ ಹಾಗೂ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಟ್ಟು ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಿಗೆ ಹೆಚ್ಚಿನ ಮೂಲಭೂತ ಸೌಲಭ್ಯ, ವೈದ್ಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕಿನ 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆಗೆ ಸಿ.ಎಸ್.ಆರ್. ನಿಧಿಯಡಿಯಲ್ಲಿ ಸಿಟಿ ಸ್ಕ್ಯಾನ್ ಅಳವಡಿಸಲು ಸೂಚಿಸಲಾಗಿದೆ ಎಂದರಲ್ಲದೆ, ಜಿಲ್ಲೆಯಲ್ಲಿ “ವೈದರ ನಡೆ ಹಳ್ಳಿ ಕಡೆ” ಎಂಬ ವಿನೂತನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿರುವ ಕುರಿತು ಶ್ಲಾಘಿಸಿದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಹೆಚ್ಚಿನ ಆರೋಗ್ಯ ಸೇವೆ ಒದಗಿಸಲು ನೆರವಾಗುವ ನಿಟ್ಟಿನಲ್ಲಿ ತಾಲ್ಲೂಕು ಆಸ್ಪತ್ರೆಯಲ್ಲಿ ಬೆಡ್‌ಗಳು ಹಾಗೂ ಐಸಿಯು ಬೆಡ್‌ಗಳನ್ನು ಹೆಚ್ಚಿಸಲಾಗುವುದು ಎಂದರಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಹಾಗೂ ಎಲ್ಲಾ ಗ್ರಾಮಗಳಲ್ಲಿನ ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. 

ಬ್ಲಾಕ್ ಫಂಗಸ್‌ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇಲ್ಲಿಯವರೆಗೂ ಔಷಧಿಗೆ ಯಾವುದೇ ರೀತಿಯ ತೊಂದರೆ ಸಂಭವಿಸಿಲ್ಲ‌ ಎಂದರು. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರು ತಮ್ಮ ಶಕ್ತಿ ಮೀರಿ ಔಷಧಗಳನ್ನು ರಾಜ್ಯಕ್ಕೆ ಸರಬರಾಜಾಗುವಂತೆ ಕ್ರಮ ವಹಿಸಿದ್ದಾರೆ ಹಾಗೂ ರಾಜ್ಯ ಸರ್ಕಾರವೂ ಸಹ 30 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಲಕ್ಷ ಚುಚ್ಚುಮದ್ದು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದರು. 

ಅವಧೂತ ವಿನಯ್ ಗುರೂಜಿ ಅವರು ಮಾತನಾಡಿ,  ಈಗಾಗಲೇ ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಹಾತ್ಮ ಗಾಂಧೀ ಸೇವಾ ಟ್ರಸ್ಟ್ ವತಿಯಿಂದ ಕೊರೋನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಗ್ರಿಗಳ ಕಿಟ್ ಹಾಗೂ ಔಷಧಿ ಕಿಟ್ ವಿತರಣೆ ಮಾಡಲಾಗಿದ್ದು, ಅದೇ ರೀತಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿಯೂ ಆಶಾ ಕಾರ್ಯಕರ್ತೆಯರಿಗೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯವಾಗಲೆಂದು ಎರಡು  ಉಚಿತ ಆಂಬ್ಯುಲೆನ್ಸ್, ಆಹಾರ ಸಾಮಗ್ರಿಗಳ ಕಿಟ್, ಔಷಧಿ ಕಿಟ್ ಹಾಗೂ 20 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳ ವಿತರಣೆ ಮಾಡಲಾಗಿದೆ ಎಂದರು. 

‌ಕರೊನಾ ಸೋಂಕು ಹರಡದಂತೆ ತಡೆಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ‌ ಎಂದರು. ಅಲ್ಲದೆ, ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಥಿತಿವಂತರು ನಿರಾಶ್ರಿತರಿಗೆ ಆಹಾರ ಒದಗಿಸುವುದು ಸೇರಿದಂತೆ ಹಲವಾರು ರೀತಿಯ ಸಹಾಯ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.

ಪರಿಸರವನ್ನು ಈಗಾಗಲೇ ನಮ್ಮ ಸ್ವಾರ್ಥಕ್ಕಾಗಿ ನಾಶ ಮಾಡಿದ್ದೇವೆ, ಇನ್ನು ಮುಂದಾದರೂ ಮರಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕಿದ್ದು, ಅರಣ್ಯ ಪ್ರದೇಶದಲ್ಲಿರುವ ಅಕೇಶಿಯಾ ಹಾಗೂ ನೀಲಗಿರಿ ಮರಗಳನ್ನು ತೆರವುಗೊಳಿಸಿ ಹಣ್ಣಿನ ಗಿಡಗಳನ್ನು ಬೆಳೆಸಬೇಕು ಎಂದರು. 

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಟ್ರಸ್ಟ್ ವತಿಯಿಂದ ಉಚಿತವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ನೀಡಲಾದ ಎರಡು ಆಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಲಾಯಿತು ಮತ್ತು 20 ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಹಸ್ತಾಂತರಿಸಲಾಯಿತು ಹಾಗೂ ಸಾಂಕೇತಿಕವಾಗಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಗ್ರಿಗಳ ಕಿಟ್, ಔಷಧಿ ಕಿಟ್‌ಗಳನ್ನು ವಿತರಿಸಲಾಯಿತು. 

ಕಾರ್ಯಕ್ರಮಕ್ಕೂ ಮುನ್ನ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. 

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ, ಬಿಡಿಎ‌ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಹಾಗೂ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರಶೆಟ್ಟಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.‌‌ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ.ಆಂಥೋನಿ‌ ಮರಿಯಪ್ಪನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ, ತಹಶೀಲ್ದಾರ್ ಶಿವರಾಜ, ಮುಜರಾಯಿ ತಹಶೀಲ್ದಾರ್ ಅನಿತಾಲಕ್ಷ್ಮೀ, ಸಿಡಿಪಿಒ ಅನಿತಾ ಲಕ್ಷ್ಮೀ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!