ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 402 ಜನ ಗುಣಮುಖರಾಗಿದ್ದು, ಹೊಸದಾಗಿ 326 ಕರೊನಾ ಪ್ರಕರಣಗಳು ಹಾಗೂ 8 ಮೃತ ಪ್ರಕರಣಗಳು ಶನಿವಾರ ವರದಿಯಾಗಿದೆ.
ಬುಲೆಟಿನ್ ವರದಿಯನ್ವಯ ದೊಡ್ಡಬಳ್ಳಾಪುರ ತಾಲೂಕಿನ 67 ಪುರುಷರು, 49 ಮಹಿಳೆಯರು ಸೇರಿ 116. ಹೊಸಕೋಟೆ ತಾಲೂಕಿನ 35 ಪುರುಷರು, 46 ಮಹಿಳೆಯರು ಸೇರಿ 81. ನೆಲಮಂಗಲ ತಾಲೂಕಿನ 32 ಪುರುಷರು, 33 ಮಂದಿ ಮಹಿಳೆಯರು ಸೇರಿ 65 ಮತ್ತು ದೇವನಹಳ್ಳಿ ತಾಲೂಕಿನ 31 ಪುರುಷರು, 21 ಮಹಿಳೆಯರು ಸೇರಿ 52 ಹಾಗೂ ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 326 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ದೊಡ್ಡಬಳ್ಳಾಪುರ ತಾಲೂಕಿನ ಆರು ಮಂದಿ, ದೇವನಹಳ್ಳಿ ಹಾಗೂ ಬೆಂಗಳೂರು ಉತ್ತರ ತಾಲೂಕಿನ ತಲಾ ಒಬ್ಬ ಸೋಂಕಿತರು ಸಾವನಪ್ಪಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 732 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8159ಕ್ಕೆ ಇಳಿಕೆಯಾಗಿದೆ. ಅಲ್ಲದೆ 23113 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 2686 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….