ಫಲಾಯನಗೈದ ಆರ್ಥಿಕ ಅಪರಾಧಿಗಳು ಮತ್ತು ಆಸ್ತಿಗಳ ಸವಾಲು ಎದುರಿಸಲು ಬಲಿಷ್ಠ ಮತ್ತು ಸಂಘಟಿತ ಅಂತಾರಾಷ್ಟ್ರೀಯ ಸಹಕಾರಕ್ಕೆ ಭಾರತ ಕರೆ

ನವದೆಹಲಿ: ರಾಷ್ಟ್ರೀಯ ವ್ಯಾಪ್ತಿಗಳನ್ನು ದಾಟಿ ಫಲಾಯನಗೈದ ಆರ್ಥಿಕ ಅಪರಾಧಿಗಳು ಮತ್ತು ಆಸ್ತಿಗಳಿಗೆ ಸಂಬಂಧಿಸಿದಂತೆ ಎದುರಾಗುತ್ತಿರುವ ಗಂಭೀರ ಸವಾಲುಗಳನ್ನು ವಿಶ್ವ ಸದ್ಯ ಎದುರಿಸುತ್ತಿದೆ ಎಂಬ ಅಂಶವನ್ನು ಭಾರತ ಇಂದು ಸ್ಪಷ್ಟವಾಗಿ ಮಂಡಿಸಿದೆ.

ಭಾರತದ ಆರ್ಥಿಕ ಅಪರಾಧಿಗಳ ಕಾಯ್ದೆ 2018 ಪ್ರಕಾರ ಪ್ರಾಧಿಕಾರಗಳಿಗೆ  ಶಿಕ್ಷೆಯ ಆಧಾರವಿಲ್ಲದೆ ಆಸ್ತಿ ಜಪ್ತಿ ಮತ್ತು ಅಪರಾಧ ಪ್ರಕರಣಗಳಲ್ಲಿ ಮುಂದುವರಿಯಲು ಅವಕಾಶ ನೀಡುತ್ತದೆ ಮತ್ತು ಫಲಾಯನಗೈದ ಆರ್ಥಿಕ ಅಪರಾಧಿಗಳು ಅಂದರೆ ಭಾರತದ ಯಾವುದೇ ನ್ಯಾಯಾಲಯದಿಂದ ನಿರ್ದಿಷ್ಟ ಅಪರಾಧದಡಿ ಬಂಧನ ವಾರಂಟ್ ಎದುರಿಸುತ್ತಿರುವವರು ಮತ್ತು ಯಾರು ಕ್ರಿಮಿನಲ್ ಪ್ರಾಸಿಕ್ಯೂಶನ್ ಅಥವಾ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ದೇಶವನ್ನು ತೊರೆದಿದ್ದಾರೋ ಅಂತಹವರ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಧಿಕಾರವಿದೆ. 

ಭ್ರಷ್ಟಾಚಾರದ ವಿರುದ್ಧ ಕ್ರಮಗಳು ಮತ್ತು ಸವಾಲುಗಳ ಕುರಿತಂತೆ ವಿಶ್ವ ಸಂಸ್ಥೆಯ ಮಹಾಸಭೆಯ(ಯುಎನ್ ಜಿಎ)ಯ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು, ದೇಶೀಯ ಕಾನೂನು ವ್ಯವಸ್ಥೆ ಮತ್ತು ಅಂತಾರಾಷ್ಟ್ರೀಯ ನಿಬಂಧನೆಗಳಿಗೆ ಅನುಗುಣವಾಗಿ ಅಂತಹ ವ್ಯಕ್ತಿಗಳು ಮತ್ತು ಆಸ್ತಿಗಳನ್ನು ವಾಪಸ್ ಗಾಗಿ ಬಲಿಷ್ಠ ಮತ್ತು ಸಂಘಟಿತ ಅಂತಾರಾಷ್ಟ್ರೀಯ ಸಹಕಾರ ಅಗತ್ಯವಿದೆ ಎಂದು ಕರೆ ನೀಡಿದರು. ಆರೋಪಿಗಳು ವಿದೇಶಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಮತ್ತು ಅಪರಾಧದ ಪ್ರಕ್ರಿಯೆಯಿಂದ ತಪ್ಪಿಸಿಕೊಂಡು ನಾನಾ ರಾಷ್ಟ್ರಗಳು ಮತ್ತು ವ್ಯಾಪ್ತಿಗಳಲ್ಲಿ ಸಂಕೀರ್ಣ ಕಾನೂನು ವ್ಯವಸ್ಥೆಗಳನ್ನು ಸೃಷ್ಟಿಸುತ್ತಿದ್ದಾರೆ, ಈ ವಿಚಾರದಲ್ಲಿ ಅಂತಾರಾಷ್ಟ್ರೀಯ ಸಹಕಾರದ ದೌರ್ಬಲ್ಯಗಳು ಮತ್ತು ಕೊರತೆಗಳನ್ನು ಅಪರಾಧಿಗಳು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡು ತಮ್ಮಅನುಕೂಲಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದರು.

ಭ್ರಷ್ಟಾಚಾರವನ್ನು ನಿಗ್ರಹಿಸುವುದು ಮತ್ತು ನಿಯಂತ್ರಿಸುವ ಕುರಿತು ವಿಶ್ವಸಂಸ್ಥೆಯ ರಾಜಕೀಯ ಘೋಷಣೆಯನ್ನು ಅನುಮೋದಿಸುವ ಮೂಲಕ ಎಲ್ಲ ಹಂತಗಳಲ್ಲಿ ಪ್ರಯತ್ನಗಳನ್ನು ತೀವ್ರಗೊಳಿಸುವುದು, ಸುಸ್ಥಿರ ರಾಜಕೀಯ ಬದ್ಧತೆ ಮತ್ತು ನಿರ್ಣಾಯಕ ಕ್ರಿಯೆಗಳಿಂದಾಗಿ ಸರಿಯಾದ ದಿಕ್ಕಿನಲ್ಲಿ ಹೋರಾಟವನ್ನು ಮುನ್ನಡೆಸಿಕೊಂಡು ಹೋಗುವ ಎಲ್ಲ ದೇಶಗಳಿಗೆ ಭಾರತ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿತು.           

ಭಾರತ ಸಾಧ್ಯವಾದಷ್ಟು ಮಟ್ಟಿಗೆ ಕಾನೂನು ನೆರವನ್ನು ಒದಗಿಸುತ್ತಿದೆ ಮತ್ತು ತನ್ನ ದೇಶೀಯ ಕಾನೂನುಗಳನ್ನು ಬಲವರ್ಧನೆಗೊಳಿಸಿರುವುದೇ ಅಲ್ಲದೆ, ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ಒಪ್ಪಂದ ಮಾಡಿಕೊಳ್ಳುವ ರಾಜ್ಯಗಳ ನಡುವೆ ಅಂತಾರಾಷ್ಟ್ರೀಯ ಸಹಕಾರದ ವ್ಯಾಪ್ತಿಯನ್ನು ವಿಸ್ತರಿಸಿದೆ ಎಂದು ಅವರು ಹೇಳಿದರು.

ಕರೊನಾ ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿರುವ ಮತ್ತು ದುಃಖವನ್ನು ಸಹಿಸಿಕೊಳ್ಳುವಲ್ಲಿ ನಮ್ಮೆಲ್ಲರ ಮಿತಿಗಳನ್ನು ಪರೀಕ್ಷಿಸುತ್ತಿರುವ ವೇಳೆ ಯುಎನ್ ಜಿಎ ಅಧಿವೇಶನ ನಡೆಯುತ್ತಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದರು. 

ಕಳೆದ ದಿನಗಳಲ್ಲಿ, ಈ ಬಿಕ್ಕಟ್ಟನ್ನು ಎದುರಿಸಲು ಭಾರತವು ಅಸಂಖ್ಯಾತ ಕ್ಷೇತ್ರಗಳ ತಜ್ಞರ ಸಮನ್ವಯ ಸಾಧಸಿದೆ ಮತ್ತು ಸುಸ್ಥಿರ ಕೋವಿಡ್-19 ನಿರ್ವಹಣೆಗೆ ತಜ್ಞರು ಮತ್ತು ವಿಜ್ಞಾನಿಗಳ ಸಲಹೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು. ಅಲ್ಲದೆ ದೇಶ ಪರೀಕ್ಷೆ, ಪತ್ತೆ, ಚಿಕಿತ್ಸೆ, ಕೋವಿಡ್ ಸೂಕ್ತ ನಡವಳಿಕೆ ಮತ್ತು ಲಸಿಕೆ ನೀಡುವಿಕೆ ಈ ಐದು ಹಂತದ ಕಾರ್ಯತಂತ್ರವನ್ನು ಅನುಷ್ಠಾನಗೊಳಿಸುತ್ತಿದ್ದು, ಇದರಿಂದಾಗಿ ಸಾಂಕ್ರಾಮಿಕ ಹರಡುವುದನ್ನು ನಿಯಂತ್ರಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಸಾಂಕ್ರಾಮಿಕ ನೋವಿನ ಜೊತೆಗೆ ಎಲ್ಲ ಹಂತಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಅಲ್ಪಾವಧಿ ಮತ್ತು ದೀರ್ಘಾವಧಿಯ ಅನಿರೀಕ್ಷಿತ ಸವಾಲುಗಳನ್ನು ತಂದೊಡ್ಡಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದರು. ಅಲ್ಲದೆ ಇದು ಸಂಪನ್ಮೂಲಗಳ ವಿತರಣೆಯನ್ನು ಗಣನೀಯವಾಗಿ –ದುರ್ಬಲಗೊಳಿಸುತ್ತದೆ, ನಮ್ಮ ಪುನರ್ ನಿರ್ಮಾಣ ಪ್ರಕ್ರಿಯೆಗಳಿಗೆ ಅಪಾಯವನ್ನುಉಂಟು ಮಾಡುತ್ತಿದೆ, ಆರ್ಥಿಕ ಒತ್ತಡ ವಿಸ್ತರಿಸುತ್ತದೆ ಮತ್ತು ಪ್ರಗತಿಗೆ ವಾಪಸ್ಸಾಗುವುದು ವಿಳಂಬವಾಗುತ್ತಿದೆ ಎಂದು ಹೇಳಿದರು. ಭ್ರಷ್ಟಾಚಾರ ನಿಗ್ರಹ ಮತ್ತು ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಸಹಕಾರ ಬಲವರ್ಧನೆಗೆ ಎಲ್ಲರೂ ಒಗ್ಗೂಡುವುದಕ್ಕೆ ಇದು ಅತ್ಯಂತ ಸೂಕ್ತ ಸಮಯ ಎಂದು ಸಚಿವರು ಹೇಳಿದರು.

ಭಾರತವು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದೆ ಮತ್ತು ನಮ್ಮ ಪ್ರಧಾನಮಂತ್ರಿಯವರು ಪಾರದರ್ಶಕತೆ ಮತ್ತು ನಾಗರಿಕ ಕೇಂದ್ರಿತ ಆಡಳಿತಕ್ಕೆ ಒತ್ತು ನೀಡಿ ‘ಕನಿಷ್ಠ ಸರ್ಕಾರ – ಗರಿಷ್ಠ ಆಡಳಿತ’ ನೀತಿಯನ್ನು ನೀಡಿದ್ದು, ಅದೇ ಭಾರತ ಸರ್ಕಾರದ ಧ್ಯೇಯವನ್ನಾಗಿ ಅನುಸರಿಸುತ್ತಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದರು. ನಗರಗಳು ಹಾಗೂ ಪಟ್ಟಣಗಳಾದ್ಯಂತ ಸ್ಥಳೀಯ ಸರ್ಕಾರಗಳೊಂದಿಗೆ ನಿರ್ಧಾರ ಕೈಗೊಳ್ಳುವುದು ಮತ್ತು ಸಮುದಾಯಗಳನ್ನು ವಿಕೇಂದ್ರೀಕರಣಗೊಳಿಸುವ ಉದ್ದೇಶದಿಂದ, ನಾಗರಿಕರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ಎಲ್ಲ ವಲಯಗಳಲ್ಲಿ ಡಿಜಿಟಲ್ ಉಪಕರಣಗಳನ್ನು ಬಳಸಿ ನವೀನ ಪರಿಹಾರಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಭಾರತ ಈಗಾಗಲೇ ಅತಿ ಹೆಚ್ಚಿನ ಪ್ರಮಾಣದ ಡಿಜಿಟಲ್ ವಹಿವಾಟುಗಳ ಮೂಲಕ ಇಡೀ ಜಗತ್ತಿನಲ್ಲಿ ಡಿಜಿಟಲ್ ವಲಯದ ಪಥದಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವರು ಹೇಳಿದರು. ತಂತ್ರಜ್ಞಾನ ಬಳಕೆಯಿಂದಾಗಿ ಸಹಾಯ ಮಾಡುವ ವೇಗ ಹೆಚ್ಚಾಗಿದೆ ಮತ್ತು ಭಾರತದಲ್ಲಿ ಜನರಿಗೆ ಸವಲತ್ತುಗಳ ವಿತರಣೆಯಲ್ಲಿ ಆಗುತ್ತಿದ್ದ ಸೋರಿಕೆ ತಪ್ಪಿದೆ. ಬಯೋಮೆಟ್ರಿಕ್ ಐಡಿ ಕಾರ್ಡ್ ಗಳ ಜೊತೆಗೆ ಬ್ಯಾಂಕ್ ಖಾತೆ ಮತ್ತು ಮೊಬೈಲ್ ಸಂಖ್ಯೆಗಳನ್ನು ಜೋಡಣೆ ಮಾಡಿರುವುದರಿಂದ ಈ ವ್ಯವಸ್ಥೆಯು ಲಕ್ಷಾಂತರ ನಾಗರಿಕರಿಗೆ ತಕ್ಷಣದ  ನೇರ ನಗದು ಪ್ರಯೋಜನಗಳ ಮೂಲಕ ಸುರಕ್ಷತೆಯನ್ನು ಒದಗಿಸಲಾಗಿದೆ.

ಗುಡ್ಡಗಾಡು ಪ್ರದೇಶಗಳಲ್ಲಿ ಆರೋಗ್ಯ ರಕ್ಷಣಾ ಅಗತ್ಯಗಳನ್ನು ಪೂರೈಸುವುದರಿಂದ ಹಿಡಿದು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತಾಂಶ ಆಧರಿತ ಸಾರ್ವಜನಿಕ ನೀತಿ ರೂಪಿಸುವುದು ತಂತ್ರಜ್ಞಾನ ಬಳಕೆ ಹಲವು ಪಾತ್ರಗಳನ್ನು ನಿರ್ವಹಿಸುತ್ತಿದೆ ಮತ್ತು ಬಹುಮುಖ್ಯವಾಗಿ ದೇಶದ ಗುಡ್ಡಗಾಡು ಪ್ರದೇಶಗಳಿಗೆ ನೆರವಾಗುತ್ತಿದೆ ಎಂದು ಸಚಿವರು ಹೇಳಿದರು.

ಡಾ.ಜಿತೇಂದ್ರ ಸಿಂಗ್ ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸುತ್ತಾ, ವಿಶೇಷವಾಗಿ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಹೋರಾಟಕ್ಕೆ ವೇಗದ ಮತ್ತು ದೃಢ ಬದ್ಧತೆ ವ್ಯಕ್ತವಾಗಬೇಕು ಎಂದು ಆಶಿಸಿದರು ಹಾಗೂ ಅದಕ್ಕಾಗಿ ಭಾರತ ಇತರೆ ರಾಷ್ಟ್ರಗಳು, ನಾಗರಿಕ ಸಮಾಜ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳ ಜೊತೆಗೂಡಿ ಭ್ರಷ್ಟಾಚಾರ ವಿರೋಧಿ ತತ್ವಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಕಾರ್ಯಕ್ಕೆ ಸಿದ್ಧವಿದೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!