ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಇಲಾಖೆಗೆ ವರ್ಗಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ಇಂದು ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಇಲಾಖೆಗೆ ವರ್ಗಾಯಿಸಲಾಗಿದೆ. ಇವರ ಸ್ಥಾನಕ್ಕೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿದ್ದ ಡಾ.ವಂಶಿ ಕೃಷ್ಣ ಅವರನ್ನು ನೇಮಿಸಲಾಗಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….