ಕೋವಿಡ್ ಮೂರನೇ ಅಲೆ ವ್ಯಾಪಿಸದಂತೆ ತಡೆಗಟ್ಟಲು ಅಧಿಕಾರಿಗಳು ಕ್ರಮವಹಿಸಬೇಕು: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಮಕ್ಕಳ ತಜ್ಞ ವೈದ್ಯರಗಳ ತಂಡ ಹಳ್ಳಿಗಳಿಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ ಮಾಡುವ ಮೂಲಕ ಕೋವಿಡ್ ಸೋಂಕಿನ ಮೂರನೇ ಅಲೆ ಹರಡದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ತಾಲ್ಲೂಕು ಮಟ್ಟದ ಕೋವಿಡ್ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಮಕ್ಕಳಿಗೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕವಾಗಿ 50 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಹಾಗೂ ವಿಕಲಚೇತನ ಮಕ್ಕಳಿಗೆ ಎರಡು ತಾಲ್ಲೂಕಿಗೆ ಒಂದರಂತೆ ಎರಡು ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ ಎಂದರು. 

ಪ್ರತಿ ತಾಲ್ಲೂಕಿನಲ್ಲಿ 5 ಮಕ್ಕಳ ತಜ್ಞ ವೈದ್ಯರನ್ನು ನೇಮಕ ಮಾಡಿಕೊಂಡು ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಸೂಚಿಸಿದ ಅವರು, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಆಹಾರ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ, ಮಕ್ಕಳು ಸೇವಿಸುವಂತಹ ಮಾತ್ರೆಗಳನ್ನು ನೀಡಬೇಕು ಎಂದು ಸಲಹೆ ನೀಡಿದರು.ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳು ನಡೆಯುತ್ತಿದ್ದು, ಶಿಕ್ಷಕರು ವಾರಕ್ಕೊಮ್ಮೆ ಕೋವಿಡ್ ಕುರಿತಾದ ಮಾಹಿತಿಯನ್ನು ನೀಡುವುದರ ಜೊತೆಗೆ ಜಾಗೃತಿ ಮೂಡಿಸುವಂತಾಗಬೇಕು ಎಂದರಲ್ಲದೆ, ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿರುವ ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಅವರಿಗೆ ಚಿಕಿತ್ಸೆ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ನಿಮ್ಹಾನ್ಸ್ ವೈದ್ಯರ ತಂಡದಿಂದ ಹಳ್ಳಿಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. 

ಲಾಕ್‌ಡೌನ್ ತೆರವುಗೊಂಡ ನಂತರ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಜಿಲ್ಲೆಗೆ ಬರಲಿದ್ದು, ಅವರಿಗೆ ಕೋವಿಡ್ ಪರೀಕ್ಷೆ ಮಾಡಿಸಬೇಕು ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವುದನ್ನು ಮುಂದುವರಿಸಲಾಗುವುದು ಎಂದರು. ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಆದೇಶವಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದರು.

ಕಡಿಮೆ ಗುಣಮಟ್ಟದ ಸ್ಯಾನಿಟೈಸರ್ ಬಳಸುವುದರಿಂದ ಹಲವು ದುಷ್ಪರಿಣಾಮಗಳು ಎದುರಾಗುವ ಸಾಧ್ಯತೆಗಳಿರುವುದರಿಂದ ಉತ್ತಮ ಗುಣಮಟ್ಟದ ಸ್ಯಾನಿಟೈಸರ್ ಬಳಸಬೇಕು ಎಂದರು. 

ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ ಅವರು ಮಾತನಾಡಿ, ಮುಂಗಾರು ಮಳೆಯು ಆರಂಭವಾಗಿದ್ದು, ನಗರ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರಲ್ಲದೆ, ಜನ ಜಾನುವಾರುಗಳಿಗೆ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಆಕಸ್ಮಿಕವಾಗಿ ಹಾನಿಯಾದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತಂದು ಪರಿಹಾರ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಮುನಿಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪುಷ್ಪಲತಾ ಜಿ.ರಾಯರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ  ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!