ದೊಡ್ಡಬಳ್ಳಾಪುರ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿದ್ದು, ಜನ ಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಬೆಲೆ ಬೆಲೆ ಹೆಚ್ಚಳದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಿದ್ದೇವೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೃಷ್ಣಬೈರೇಗೌಡ ತಿಳಿಸಿದರು.
ನಗರದ 18 ಪ್ರದೇಶಗಳಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಡೆಯುತ್ತಿರುವ ನಿತ್ಯ ಅನ್ನದಾಸೋಹದ ಸ್ಥಳಗಳಿಗೆ ಬೇಟಿ ನೀಡಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚು ಮಾಡುವ ಮೂಲಕ ರೈತರ ಮತ್ತು ಬಡವರ ಹೊಟ್ಟೆ ಹೊಡೆಯುತ್ತಿದೆ. ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನಗಳನ್ನು ಲೂಟಿ ಮಾಡುತ್ತಿದ್ದಾರೆ. ಹೀಗಾಗಿ ಕೂಡಲೆ ಸರ್ಕಾರ ಹಿಂದಿನ ಯುಪಿಎ ಸರ್ಕಾರದಲ್ಲಿ ಇದ್ದ ಬೆಲೆಗೆ ಡಿಸೇಲ್ ಮತ್ತು ಪೆಟ್ರೋಲ್ ಬೆಲೆ ಇಳಕೆ ಮಾಡಬೇಕು ಎಂದರು.
ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಜನ ಸಾಯುತ್ತಿದ್ದಾರೆ ಇನ್ನೊಂದು ಕಡೆ ಸಂಪಾದನೆ ಕಳೆದುಕೊಂಡ ದುಡಿಯುವ ವರ್ಗ ಅನ್ನಕ್ಕೂ ಪರದಾಡುವ ಪರಿಸ್ಥಿತಿಗೆ ಬಂದಿದೆ. ಇಂತಹ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಸರ್ಕಾರದ ಜೊತೆ ಕೆಲಸ ಮಾಡಲು ಸಿದ್ದವಿದ್ದರು, ನಮ್ಮ ವಿಶ್ವಾಸ ತೆಗೆದುಕೊಳ್ಳುವುದಿರಲಿ ಅವರು ಅಕಾರಕ್ಕೆ ಕಚ್ಚಾಟ ನಡೆಸುವುದೇ ಮುಖ್ಯವಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜನಗಳ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅಕಾರಕ್ಕಾಗಿ ಕಚ್ಚಾಟ ನಡೆಸುತ್ತಿರುವುದು ದುರಂತ ಎಂದರು.
ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಸುಮಾರು 18 ಭಾಗಗಳಲ್ಲಿ ನಿತ್ಯ ಅನ್ನ ಕೊಡುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದೆ ರೀತಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನ ನೀಡುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….