ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳು ತಾವು ಪಡೆಯುವ ಶಾಲಾ ಶುಲ್ಕವನ್ನು ಸಾರ್ವಜನಿಕರಿಗೆ ಕಾಣುವಂತೆ ಶಾಲಾ ಮುಂಭಾಗದಲ್ಲಿ ಪ್ರಕಟಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ತಿಳಿಸಿದ್ದಾರೆ.
ಖಾಸಗಿ ಶಾಲೆಗಳು ಬಡ ಗ್ರಾಮೀಣ ಪೋಷಕರನ್ನು ಹೆದರಿಸಿ, ಶುಲ್ಕ ವಸೂಲಿ ಮಾಡುತ್ತಿದ್ದಾರೆ ಹಾಗೂ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಅನುಮತಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿದ್ದು, ಯಾವುದೇ ಶಾಲೆಯ ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ, ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪೋಷಕರು ಲಿಖಿತವಾಗಿ ದೂರು ಸಲ್ಲಿಸಬಹುದು.
ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿರುವ ನಂದಿನಿ ವಿದ್ಯಾನಿಕೇತನ ಶಾಲೆಯವರು ಶಾಲಾ ಶುಲ್ಕವನ್ನು ಸಂಪೂರ್ಣವಾಗಿ ಪಾವತಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆ, ಶಾಲೆಗೆ ಭೇಟಿ ನೀಡಿದ ವೇಳೆ ಶಾಲೆಯು ಮುಚ್ಚಿದ್ದು, ಶಾಲೆ ಆರಂಭ ನಂತರ ಶಾಲೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಲಾಗುವುದು. ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಶೇ.70ರಷ್ಟು ಶಾಲಾ ಶುಲ್ಕ ಪಡೆಯುವ ಬಗ್ಗೆ 2020-21ನೇ ಸಾಲಿನ ಸರ್ಕಾರದ ಆದೇಶವನ್ನು 2021-22ನೇ ಸಾಲಿಗೂ ಸರ್ಕಾರದಿಂದ ನಿರೀಕ್ಷಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….