ದೊಡ್ಡಬಳ್ಳಾಪುರ: ಆಟೋ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತ ಸಂಭವಿಸಿ, ಆಟೋ ಚಾಲಕ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡನರಸಯ್ಯನ ಪಾಳ್ಯದ ಸಮೀಪ ಸಂಭವಿಸಿದೆ.
ಮೃತ ಆಟೋ ಚಾಲಕನನ್ನು ಮರಿಮಾಕನಹಳ್ಳಿ ಗ್ರಾಮದ ರಘು(35) ಎಂದು ಗುರುತಿಸಲಾಗಿದ್ದು, ದ್ವಿಚಕ್ರ ವಾಹನ ಚಾಲಕ ಬಿದುರಿನ ಗಳಗಳನ್ನು ತುಂಬಿಕೊಂಡು ಎದುರಾಗಿ, ಒಂದಕ್ಕೊಂದು ಡಿಕ್ಕಿ ಸಂಭವಿಸಿ ಆಟೋ ಉರುಳಿ ಬಿದ್ದ ಕಾರಣ ಚಾಲಕ ಸಾವನಪ್ಪಿದ್ದಾರೆ ಎನ್ನಲಾಗಿದ್ದರೆ, ಆಶ್ಚರ್ಯಕರ ರೀತಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….