ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‍ ಹೋರಾಟಕ್ಕೆ ಸಜ್ಜು: ಕೃಷ್ಣಬೈರೇಗೌಡ

ದೊಡ್ಡಬಳ್ಳಾಪುರ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿದ್ದು, ಜನ ಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಬೆಲೆ ಬೆಲೆ ಹೆಚ್ಚಳದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಿದ್ದೇವೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೃಷ್ಣಬೈರೇಗೌಡ ತಿಳಿಸಿದರು. 

ನಗರದ 18 ಪ್ರದೇಶಗಳಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಡೆಯುತ್ತಿರುವ ನಿತ್ಯ ಅನ್ನದಾಸೋಹದ ಸ್ಥಳಗಳಿಗೆ ಬೇಟಿ  ನೀಡಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚು ಮಾಡುವ ಮೂಲಕ ರೈತರ ಮತ್ತು ಬಡವರ ಹೊಟ್ಟೆ ಹೊಡೆಯುತ್ತಿದೆ. ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನಗಳನ್ನು ಲೂಟಿ ಮಾಡುತ್ತಿದ್ದಾರೆ. ಹೀಗಾಗಿ ಕೂಡಲೆ ಸರ್ಕಾರ ಹಿಂದಿನ ಯುಪಿಎ ಸರ್ಕಾರದಲ್ಲಿ ಇದ್ದ ಬೆಲೆಗೆ  ಡಿಸೇಲ್ ಮತ್ತು ಪೆಟ್ರೋಲ್ ಬೆಲೆ ಇಳಕೆ ಮಾಡಬೇಕು ಎಂದರು.

ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಜನ ಸಾಯುತ್ತಿದ್ದಾರೆ ಇನ್ನೊಂದು ಕಡೆ ಸಂಪಾದನೆ ಕಳೆದುಕೊಂಡ ದುಡಿಯುವ ವರ್ಗ ಅನ್ನಕ್ಕೂ ಪರದಾಡುವ ಪರಿಸ್ಥಿತಿಗೆ ಬಂದಿದೆ. ಇಂತಹ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಸರ್ಕಾರದ ಜೊತೆ ಕೆಲಸ ಮಾಡಲು ಸಿದ್ದವಿದ್ದರು, ನಮ್ಮ ವಿಶ್ವಾಸ ತೆಗೆದುಕೊಳ್ಳುವುದಿರಲಿ ಅವರು ಅಕಾರಕ್ಕೆ ಕಚ್ಚಾಟ ನಡೆಸುವುದೇ ಮುಖ್ಯವಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜನಗಳ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅಕಾರಕ್ಕಾಗಿ ಕಚ್ಚಾಟ ನಡೆಸುತ್ತಿರುವುದು ದುರಂತ ಎಂದರು. 

ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ದೊಡ್ಡಬಳ್ಳಾಪುರದಲ್ಲಿ ಸುಮಾರು 18 ಭಾಗಗಳಲ್ಲಿ ನಿತ್ಯ ಅನ್ನ ಕೊಡುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದೆ ರೀತಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನ ನೀಡುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!