ಮಸೀದಿ ಮತ್ತು ಮದರಸಾಗಳ ಮೌಲ್ವಿಗಳಿಗೆ ನೀಡಲಾಗುತ್ತಿದ್ದ ತಸ್ತಿಕ್ ಭತ್ಯೆಯನ್ನು ನಿಲ್ಲಿಸುವಂತೆ ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ

ಬೆಂಗಳೂರು: ಮಸೀದಿ ಮತ್ತು ಮದರಸಾಗಳ ಮೌಲ್ವಿಗಳಿಗೆ ನೀಡಲಾಗುತ್ತಿದ್ದ ತಸ್ತಿಕ್ ಭತ್ಯೆಯನ್ನು ನಿಲ್ಲಿಸುವಂತೆ ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಬುಧವಾರ ಆದೇಶಿಸಿದ್ದಾರೆ.

ಮುಜರಾಯಿ ಇಲಾಖೆಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ಯೆ ವಿತರಣೆಯಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. 

ವಿಎಚ್‌ಪಿ ಮುಖಂಡರಾದ ಶರಣ್ ಪಂಪ್‌ವೆಲ್ ಮತ್ತು ಇತರರು ಸಚಿವರಿಗೆ ಇಂದು ಬೆಳಗ್ಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದರು. ಅದರಲ್ಲಿ ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಹಿಂದೂ ಅರ್ಚಕರಿಗೆ ತಸ್ತಿಕ್ ಭತ್ಯೆ ನೀಡುವ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ. ಆದರೆ ಕರ್ನಾಟಕ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಣವನ್ನು ಮಸೀದಿಗಳು ಮತ್ತು ಮದರಸಾಗಳ ಮೌಲ್ವಿಗಳಿಗೆ ಕೋವಿಡ್ ಭತ್ಯೆಯಾಗಿ ಬಳಸುವುದನ್ನು ವಿಎಚ್ ಪಿ ನಾಯಕರು ತೀವ್ರವಾಗಿ ವಿರೋಧಿಸಿದ್ದರು. 

ದಕ್ಷಿಣ ಕನ್ನಡದಲ್ಲಿ 41 ಮೌಲ್ವಿಗಳಿಗೆ ತಸ್ಡಿಕ್ ಭತ್ಯೆ ನೀಡಲಾಗುತ್ತಿದೆ. ದೇವಾಲಯದ ನಿಧಿಯನ್ನು ದೇವಾಲಯಗಳಿಗೆ ಮಾತ್ರ ಬಳಸಬೇಕು. ಮಸೀದಿಗಳು ಮತ್ತು ಮದರಸಾಗಳಿಗೆ ಬಳಸಬಾರದು. ಅದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು. ಈ ಹಿನ್ನಲೆಯಲ್ಲಿ  ಹಿಂದೂಯೇತರರಿಗೆ ತಲುಪಿರುವ ಕೋವಿಡ್ ಭತ್ಯೆಯನ್ನು ತಸ್ತಿಕ್ ರೂಪದಲ್ಲಿ ಹಿಂಪಡೆಯಲು ಸಚಿವರು ಆದೇಶಿಸಿದ್ದಾರೆ ಎಂದು ಡಿಐಪಿಆರ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಿಂದೂ ಅಲ್ಲದ ಪೂಜಾ ಕ್ಷೇತ್ರಗಳಿಗೆ ಮುಜರಾಯಿ ನಿಧಿಯನ್ನು ಬಳಸುತ್ತಿರುವ ಬಗ್ಗೆ ಹಿಂದೂ ನಾಯಕರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ತಸ್ತಿಕ್ ನಿಧಿಯನ್ನು ಹಿಂದೂಯೇತರ ಪೂಜಾ ಕ್ಷೇತ್ರಗಳಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂಬ ಮಾಹಿತಿಯಿದೆ. ಅದನ್ನು ಈಗ ನಿಲ್ಲಿಸಲಾಗುವುದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

ಒಂದು ವರ್ಷದಲ್ಲಿ 27,000ಕ್ಕೂ ಹೆಚ್ಚು ಹಿಂದೂ ದೇವಾಲಯಗಳು ಒಟ್ಟು 133 ಕೋಟಿ ರೂ.ಗಳ ತಸ್ತಿಕ್ ಭತ್ಯೆಯನ್ನು ಪಡೆಯುತ್ತಿವೆ ಎಂದು ಟಿಪ್ಪಣಿ ತಿಳಿಸಿದೆ. ಈ ಪೈಕಿ 764 ಹಿಂದೂಯೇತರ ಪೂಜಾ ಕ್ಷೇತ್ರಗಳು ಸಹ ತಸ್ತಿಕ್ ಸ್ವೀಕರಿಸುತ್ತಿವೆ. ಸಚಿವರ ಸೂಚನೆಯ ಆಧಾರದ ಮೇಲೆ, ಹಿಂದೂಯೇತರ ಪೂಜಾ ಕ್ಷೇತ್ರಗಳಿಗೆ ತಸ್ತಿಕ್ ಭತ್ಯೆಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ

[ccc_my_favorite_select_button post_id="111942"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!