ಬೆಂ.ಗ್ರಾ.ಜಿಲ್ಲೆ: 2021-22ನೇ ಸಾಲಿನ ಮರು ವಿನ್ಯಾಸಗೊಳಿಸಿದ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಅವರನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕಿಗೆ ಸಂಬಂಧಪಟ್ಟ ದ್ರಾಕ್ಷಿ, ಮಾವು ಬೆಳೆಗಳಿಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲ್ಲೂಕುಗಳಿಗೆ ದ್ರಾಕ್ಷಿ ಮತ್ತು ಮಾವು ಹಾಗೂ ನೆಲಮಂಗಲ ತಾಲ್ಲೂಕಿಗೆ ಮಾವು ಬೆಳೆಯನ್ನು ಬೆಳೆ ವಿಮೆ ಯೋಜನೆಗೆ ಒಳಪಡಿಸಲಾಗಿದ್ದು, ಜಿಲ್ಲೆಯ ಆಯಾ ತಾಲ್ಲೂಕಿಗೆ ಸಂಬಂಧಪಟ್ಟ ಬೆಳೆಗಳಿಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.
ಈ ಯೋಜನೆಯಲ್ಲಿ ಒಳಪಡಿಸಲಾಗುವ ಬೆಳೆಗಳಿಗೆ, ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ನೋಂದಣಿ ಮಾಡಿಸಿಕೊಳ್ಳಬಹುದಾಗಿದ್ದು, ಮಾರ್ಗಸೂಚಿಯನ್ವಯ ಬ್ಯಾಂಕಿನಲ್ಲಿ ಸಾಲ ಮಂಜೂರಾದ ಎಲ್ಲಾ ರೈತರನ್ನು ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು.
ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.
ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರ್ ಗೆ ರೂ. 2,80,000ಗಳ ವಿಮಾ ಮೊತ್ತವಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ 5% ಅಂದರೆ ರೂ. 14,000 ಗಳಾಗಿರುತ್ತದೆ. ವಿಮಾ ಕಂತು ನೋಂದಾಯಿಸಿಕೊಳ್ಳಲು 2021ರ ಜೂನ್ 30 ಕೊನೆಯ ದಿನವಾಗಿದೆ.
ಮಾವು ಬೆಳೆಗೆ ಪ್ರತಿ ಹೆಕ್ಟೇರ್ ಗೆ ರೂ. 80,000 ಗಳ ವಿಮಾ ಮೊತ್ತವಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ 5% ಅಂದರೆ ರೂ. 4,000 ಗಳಾಗಿರುತ್ತದೆ. ವಿಮಾ ಕಂತು ನೋಂದಾಯಿಸಿಕೊಳ್ಳಲು 2021ರ ಜುಲೈ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿಪಂ) ಪಿ.ಮಂಜುಳಾ(ಮೊ.ಸಂ.:9448825101), ತಾಂತ್ರಿಕ ಸಹಾಯಕ ಉಮಾಪತಿ ಹೆಚ್.ಜಿ.(ಮೊ.ಸಂ.:9606117615), ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಶ್ರೀನಿವಾಸ್ ಎಂ. (ಮೊ.ಸಂ.:9632410677), ತಾಂತ್ರಿಕ ಸಹಾಯಕ ಮಾರುತಿ (ಮೊ.ಸಂ.: 9741895988), ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಪ್ರಶಾಂತ್ ಆರ್ (ಮೊ.ಸಂ.:9538953949), ತಾಂತ್ರಿಕ ಸಹಾಯಕ ಸೋಮಶೇಖರ್ (ಮೊ.ಸಂ.: 8453966868), ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಸುಬ್ರಮಣ್ಯ.ಜೆ.ವಿ. (ಮೊ.ಸಂ.: 9901754339), ತಾಂತ್ರಿಕ ಸಹಾಯಕ ವಿಜಯಕುಮಾರ್ (ಮೊ.ಸಂ.: 9902581832) ಹಾಗೂ ಕಚೇರಿ ದೂರವಾಣಿ ಸಂಖ್ಯೆ: 080-29787453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….