ಬೆಂ.ಗ್ರಾ.ಜಿಲ್ಲೆ: 2021ನೇ ಸಾಲಿನ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ರವರನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆದ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ ಅವರು ತಿಳಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಮತ್ತು ವಿಜಯಪುರ ಹೋಬಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಮತ್ತು ತೂಬಗೆರೆ ಹೋಬಳಿ, ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ, ಜಡಿಗೇನಹಳ್ಳಿ ಮತ್ತು ನಂದಗುಡಿ ಹೋಬಳಿ ಹಾಗೂ ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿಯ ಟೊಮ್ಯಾಟೊ ಬೆಳೆಯನ್ನು ಬೆಳೆ ವಿಮೆ ಯೋಜನೆಗೆ ಒಳಪಡಿಸಲಾಗಿದೆ.
ಆಯಾ ತಾಲ್ಲೂಕಿನ ಹೋಬಳಿಯಲ್ಲಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.
ಈ ಯೋಜನೆಯಲ್ಲಿ ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ. ಟೊಮ್ಯಾಟೊ ಬೆಳೆಗೆ ಪ್ರತಿ ಹೆಕ್ಟೇರ್ ಗೆ ರೂ. 1,18,000 ಗಳ ವಿಮಾ ಮೊತ್ತವಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ 5% ಅಂದರೆ ರೂ. 5,900 ಗಳಾಗಿರುತ್ತದೆ. ವಿಮಾ ಕಂತು ನೋಂದಾಯಿಸಿಕೊಳ್ಳಲು 2021ರ ಜುಲೈ 15 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿಪಂ) ಪಿ.ಮಂಜುಳಾ(ಮೊ.ಸಂ.:9448825101), ತಾಂತ್ರಿಕ ಸಹಾಯಕ ಉಮಾಪತಿ ಹೆಚ್.ಜಿ.(ಮೊ.ಸಂ.:9606117615), ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಶ್ರೀನಿವಾಸ್ ಎಂ. (ಮೊ.ಸಂ.:9632410677), ತಾಂತ್ರಿಕ ಸಹಾಯಕ ಮಾರುತಿ (ಮೊ.ಸಂ.: 9741895988), ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಪ್ರಶಾಂತ್ ಆರ್ (ಮೊ.ಸಂ.:9538953949), ತಾಂತ್ರಿಕ ಸಹಾಯಕ ಸೋಮಶೇಖರ್ (ಮೊ.ಸಂ.: 8453966868), ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಸುಬ್ರಮಣ್ಯ.ಜೆ.ವಿ. (ಮೊ.ಸಂ.: 9901754339), ತಾಂತ್ರಿಕ ಸಹಾಯಕ ವಿಜಯಕುಮಾರ್ (ಮೊ.ಸಂ.: 9902581832) ಹಾಗೂ ಕಚೇರಿ ದೂರವಾಣಿ ಸಂಖ್ಯೆ: 080-29787453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….