ಲಾಕ್‍ಡೌನ್ ಪರಿಹಾರ ಪ್ಯಾಕೇಜ್ ಕೇವಲ ಕಣ್ಣೊರೆಸುವ ತಂತ್ರ: ದೊಡ್ಡಬಳ್ಳಾಪುರದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಕೊವಿಡ್ ಲಾಕ್‌ಡೌನ್‌ ಹಿನ್ನಲೆಯಲ್ಲಿ ಪ್ರಕಟಿಸಿರುವ ಪ್ಯಾಕೇಜ್ ಕೇವಲ ನಾಮಕಾವಸ್ತೆಯಾಗಿದ್ದು, ಬಡವರಿಗೆ ಸರ್ಕಾರದ ಯೋಜನೆಗಳು ತಲುಪುತ್ತಿಲ್ಲ  ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.

ನಗರದ 28 ಪ್ರದೇಶಗಳಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಡೆಸುತ್ತಿರುವ ನಿತ್ಯ ಅನ್ನದಾಸೋಹದ ಸ್ಥಳಗಳಿಗೆ ಬೇಟಿ  ನೀಡಿ ಅವರು ಮಾತನಾಡಿದರು.

ಪರಿಹಾರ ಪಡೆಯಲು ಫಲಾನುವಭವಿಗಳ ಆ್ಯಪ್ ಚಾಲನೆ ಆಗುತ್ತಿಲ್ಲ. ರಾಜ್ಯದಲ್ಲಿರುವ ಒಂದೂವರೆ ಕೋಟಿ ಬಿಪಿಎಲ್ ಕಾರ್ಡ್ ದಾರರು ಇದ್ದಾರೆ. ಅವರ ಕುಟುಂಬಗಳಿಗೆ ತಲಾ ಹತ್ತು ಸಾವಿರ ಹಣವನ್ನು ವರ್ಗಾಯಿಸಿದರೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿರುವ ಹಿಂದೂ ದೇವಾಲಗಳಿಂದ ಬರುವ ಆದಾಯವನ್ನು ಕೇವಲ ಹಿಂದೂ ದೇಗುಲಗಳಲ್ಲಿ ಬಳಕೆ ಮಾಡಲಾಗುತ್ತದೆ. ಇತರೆ ಯಾರಿಗೂ ಬಳಕೆ ಮಾಡಲಾಗುವುದಿಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಹಜ್ ಮತ್ತು ವಕ್ಪ್ ಸಚಿವ ಆನಂದ್ ಸಿಂಗ್ ಅವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಶ್ರೀನಿವಾಸ ಪೂಜಾರಿ ಕೇವಲ ಮುಜರಾಯಿ ಇಲಾಖೆ ಸಚಿವ ಅವರು ಹೇಳಿದರೆ ನಡೆಯುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಏನು ಬೇಕಾದರೂ ಆಗುತ್ತದೆ ಎಂದರು.

ನನ್ನ ಮಗ ಮತ್ತು ನಿಖಿಲ್ ಇಬ್ಬರನ್ನೂ ಒಂಬತ್ತನೇ ತರಗತಿಯಿಂದಲೂ ನೋಡುತ್ತಿದ್ದೇನೆ. ನಿಖಿಲ್ ಕುಮಾರಸ್ವಾಮಿ ಸಹ ನನ್ನ ಮಗನಿದ್ದಂತೆ. ನಿಖಿಲ್ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

ಈ ವೇಳೆ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮಿಪತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಸನಘಟ್ಟ ರವಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶ್ರೀನಗರ ಬಷೀರ್, ಮುಖಂಡರಾದ ಸೋಮರುದ್ರಶರ್ಮ, ಆಂಜನಮೂರ್ತಿ, ಮುನಿರಾಜು ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!