ಬೆಂ.ಗ್ರಾ.ಜಿಲ್ಲೆ: ರಾಜ್ಯ ಸರ್ಕಾರವು ಕರೊನಾ ನಿಯಂತ್ರಣಕ್ಕಾಗಿ ಜೂ.14ರಿಂದ 21ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡಲಾಗಿದ್ದು, ಜಿಲ್ಲೆಯ ಜನತೆ ಕೋವಿಡ್-19 ನಿಯಮಗಳನ್ನು ಪಾಲಿಸುವ ಮೂಲಕ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗಲು ಸಹಕಾರ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ರಾಜ್ಯ ಕಾರ್ಯಕಾರಿ ಸಮಿತಿಯು ರಾಜ್ಯದಲ್ಲಿ ಕೋವಿಡ್-19 ಪ್ರಸರಣದ ಸರಪಳಿಯನ್ನು ಮುರಿಯಲು ಜೂನ್ 3ರಂದು ಹೊರಡಿಸಿದ್ದ ಪರಿಷ್ಕೃತ ಮಾರ್ಗಸೂಚಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದುವರೆಯಲಿದ್ದು, ಬೆಳಿಗ್ಗೆ 6:00 ಗಂಟೆಯಿಂದ 10:00 ಗಂಟೆಯವರೆಗೆ ಹಣ್ಣು, ತರಕಾರಿ, ದಿನಸಿ ಮಾರಾಟಕ್ಕೆ ಇಂದಿನಂತೆ ಸಮಯಾವಕಾಶ ನೀಡಲಾಗಿದ್ದು, ಮಾರ್ಗಸೂಚಿಯನ್ನು ಜಿಲ್ಲೆಯ ಜನತೆ ಕಡ್ಡಾಯವಾಗಿ ಪಾಲಿಸಬೇಕು.
ಪರಿಷ್ಕೃತ ಮಾರ್ಗಸೂಚಿಗಳು 2021ರ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತವೆ. ರಫ್ತುಗಳಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ಎಲ್ಲಾ ಘಟಕಗಳು ಅಥವಾ ಸಂಸ್ಥೆಗಳು ಶೇ. 30% ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಅನುಮತಿಸಲಾದ ಘಟಕಗಳು ಅಥವಾ ಸಂಸ್ಥೆಗಳು 1000 ಕ್ಕಿಂತ ಹೆಚ್ಚು ಜನರನ್ನು ನೇಮಿಸಿಕೊಳ್ಳುವಂತಹ ಎಲ್ಲಾ ಘಟಕಗಳು ವಾರಕ್ಕೆ ಎರಡು ಬಾರಿ ಕನಿಷ್ಠ 10% ಉದ್ಯೋಗಿಗಳಿಗೆ ಕೋವಿಡ್-19 ಪರೀಕ್ಷೆಯನ್ನು ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….