ಬೆಂ.ಗ್ರಾ.ಜಿಲ್ಲೆ: ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: 2021ನೇ ಸಾಲಿನ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ರವರನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆದ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ ಅವರು ತಿಳಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಮತ್ತು ವಿಜಯಪುರ  ಹೋಬಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಮತ್ತು ತೂಬಗೆರೆ ಹೋಬಳಿ, ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ, ಜಡಿಗೇನಹಳ್ಳಿ ಮತ್ತು ನಂದಗುಡಿ ಹೋಬಳಿ ಹಾಗೂ ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿಯ ಟೊಮ್ಯಾಟೊ ಬೆಳೆಯನ್ನು ಬೆಳೆ ವಿಮೆ ಯೋಜನೆಗೆ ಒಳಪಡಿಸಲಾಗಿದೆ.

ಆಯಾ ತಾಲ್ಲೂಕಿನ ಹೋಬಳಿಯಲ್ಲಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.

ಈ ಯೋಜನೆಯಲ್ಲಿ ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.                                                                                                                        ಟೊಮ್ಯಾಟೊ ಬೆಳೆಗೆ ಪ್ರತಿ ಹೆಕ್ಟೇರ್ ಗೆ ರೂ. 1,18,000 ಗಳ ವಿಮಾ ಮೊತ್ತವಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ 5% ಅಂದರೆ ರೂ.‌ 5,900 ಗಳಾಗಿರುತ್ತದೆ. ವಿಮಾ ಕಂತು ನೋಂದಾಯಿಸಿಕೊಳ್ಳಲು 2021ರ ಜುಲೈ 15 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿಪಂ) ಪಿ.ಮಂಜುಳಾ(ಮೊ.ಸಂ.:9448825101),‌ ತಾಂತ್ರಿಕ ಸಹಾಯಕ ಉಮಾಪತಿ ಹೆಚ್.ಜಿ.(ಮೊ.ಸಂ.:9606117615), ದೊಡ್ಡಬಳ್ಳಾಪುರ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಶ್ರೀನಿವಾಸ್ ಎಂ. (ಮೊ.ಸಂ.:9632410677),‌ ತಾಂತ್ರಿಕ ಸಹಾಯಕ ಮಾರುತಿ (ಮೊ.ಸಂ.: 9741895988), ಹೊಸಕೋಟೆ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಪ್ರಶಾಂತ್ ಆರ್ (ಮೊ.ಸಂ.:9538953949), ತಾಂತ್ರಿಕ ಸಹಾಯಕ ಸೋಮಶೇಖರ್ (ಮೊ.ಸಂ.: 8453966868), ನೆಲಮಂಗಲ‌ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಸುಬ್ರಮಣ್ಯ.ಜೆ.ವಿ. (ಮೊ.ಸಂ.: 9901754339), ತಾಂತ್ರಿಕ ಸಹಾಯಕ ವಿಜಯಕುಮಾರ್ (ಮೊ.ಸಂ.: 9902581832) ಹಾಗೂ ಕಚೇರಿ ದೂರವಾಣಿ ಸಂಖ್ಯೆ: 080-29787453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ

ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು

[ccc_my_favorite_select_button post_id="120114"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!