ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ರೀಡಾಪಟುಗಳಿಗೆ 2021ರ ಜೂನ್ 11 ಮತ್ತು 12 ರಂದು ತಾಲ್ಲೂಕುವಾರು ಲಸಿಕಾಕರಣ ಅಭಿಯಾನವನ್ನು ಆಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಗೀತಾ ಅವರು ತಿಳಿಸಿದ್ದಾರೆ.
ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿರುವ ಕ್ರೀಡಾಪಟುಗಳು ಆಧಾರ್ ಗುರುತಿನ ಚೀಟಿ ಮತ್ತು ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಿರುವ ಪ್ರಮಾಣ ಪತ್ರದೊಡನೆ ಬಂದು ನೇರವಾಗಿ ಲಸಿಕಾಕರಣ ಅಭಿಯಾನದಲ್ಲಿ ಭಾಗವಹಿಸಿ, ಲಸಿಕೆಯನ್ನು ಪಡೆಯಬಹುದು.
2021ರ ಜೂನ್ 11ರಂದು ದೇವನಹಳ್ಳಿ ಟೌನ್‌ನಲ್ಲಿರುವ ಜೂನಿಯರ್ ಕಾಲೇಜಿನಲ್ಲಿ ಬೆಳಿಗ್ಗೆ 10.00 ಗಂಟೆಯಿಂದ 1.00 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರಗೆ ಹೊಸಕೋಟೆಯ ಬಾಲಕರ ಪ್ರೌಢಶಾಲೆಯಲ್ಲಿ ಲಸಿಕೆ ನೀಡಲಾಗುವುದು.
2021ರ ಜೂನ್12 ರಂದು ನೆಲಮಂಗಲ ಟೌನ್‌ನಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಮೊ.ಸಂ.: 9845608598 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಗೀತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….