ದೊಡ್ಡಬಳ್ಳಾಪುರ: ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಡುತ್ತಿರುವ ಕಾರಣ, ನಗರಸಭೆಯಿಂದ ವನ್ನಿಗರಪೇಟೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ನಗರಸಭೆ ವ್ಯಾಪ್ತಿಯ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೂ ವನ್ನಿಗರಪೇಟೆಯಲ್ಲಿ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಟ್ಟಿರುವ ಕಾರಣ ಆರೋಗ್ಯ ಇಲಾಖೆಯ ಸೂಚನೆ ಮೇರೆಗೆ, ಆ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದ್ದು, ಸ್ಯಾನಿಟೈಸ್ ಮಾಡಿಸಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದರು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸೋಂಕು ಕಡಿಮೆಯಾಗುತ್ತಿಲ್ಲ ಎಂಬ ಆತಂಕ ಎದುರಾಗಿದೆ.
ಬುಲೆಟಿನ್ ವರದಿಯಲ್ಲಿ ಜಿಲ್ಲೆಯ ಇತರ ತಾಲೂಕುಗಳಿಗಿಂತ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಮೊದಲ ಸ್ಥಾನದಲ್ಲಿಯೇ ಉಳಿಯುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….