ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಎರಡನೇ ಅಲೆಯ ಸಂದರ್ಭದಲ್ಲೂ ಸಹ ಜಿಲ್ಲೆಯಲ್ಲಿ ಹೆಚ್ಚು ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಗಗಳಲ್ಲಿ ಪಡಿತರ ವಿತರಿಸುವ ಮೂಲಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ(ಪಿ.ಡಿ.ಎಸ್.) ರಾಜ್ಯದಲ್ಲಿಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 368 ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡಲಾಗುತ್ತಿದ್ದು, ಜೂನ್ ಮಾಹೆಯ ಪಡಿತರ ವಿತರಣೆ ಮಾಹಿತಿಯನ್ವಯ ಒಟ್ಟು 248297 ರೇಷನ್ ಕಾರ್ಡ್‌ಗಳ ಪೈಕಿ 64466 ರೇಷನ್ ಕಾರ್ಡುದಾರರು ಅಂದರೆ ಒಟ್ಟು 223280 ಪಡಿತರ ಸದಸ್ಯರು ರೇಶನ್ ಪಡೆದಿದ್ದಾರೆ ಹಾಗೂ 15834.20 ರಷ್ಟು ಕ್ವಿಂಟಾಲ್ ಪ್ರಮಾಣದ ಆಹಾರ ಧಾನ್ಯವನ್ನು ವಿತರಿಸಲಾಗಿದೆ.
ಶೇ.25.96 ರಷ್ಟು ರೇಶನ್ ಕಾರ್ಡುದಾರರಿಗೆ ಪಡಿತರ ಆಹಾರ ಧಾನ್ಯಗಳನ್ನು ವಿತರಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯದಲ್ಲಿಯೇ ಪಡಿತರ ವಿತರಣಾ ವ್ಯವಸ್ಥೆಯಲ್ಲಿ 2ನೇ ಶ್ರೇಣಿ ಸ್ಥಾನದಲ್ಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….