ದೊಡ್ಡಬಳ್ಳಾಪುರ: ಅಸಂಘಟಿತ ಕಾರ್ಮಿಕರಾದ ಬೀದಿಬದಿ ವ್ಯಾಪಾರಿಗಳು ಮತ್ತು ಆಟೋ ಚಾಲಕರಿಗೆ ಸಿಐಟಿಯುವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು.
ನಗರದ ಸಿಐಟಿಯು ಕಚೇರಿಯಲ್ಲಿ ಅಸಂಘಟಿತರಿಗೆ ಅನ್ನಪೂರ್ಣ ಅಭಿಯಾನವನ್ನು ಸಾಂಕೇತಿಕವಾಗಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕಾಮ್ರೆಡ್ ಆರ್.ಚಂದ್ರತೇಜಸ್ವಿ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್, ಅಂಗನವಾಡಿ ನೌಕರರ ಸಂಘದ ಎಲ್.ಆರ್.ನಳಿನಾಕ್ಷಿ, ಆಟೋ ಚಾಲಕರ ಸಂಘದ ಮುಖಂಡರಾದ ಇನಾಯತ್ ಪಾಷಾ, ಏಜಾಜ್, ಬೀದಿ ಬದಿ ವ್ಯಾಪಾರಿಗಳ ಸಂಘದ ಮುಖಂಡರಾದ ನರೇಶ್ ಕುಮಾರ್, ಸೈಯದ್ ಅಲಿ, ನೇಕಾರರ ಹಿತರಕ್ಷಣಾ ಸಮಿತಿ ಮುಖಂಡ ಎಂ.ಚೌಡಯ್ಯ, ಬಿರ್ಲಾ ಸೂಪರ್ ಕಾರ್ಮಿಕರ ಸಂಘದ ಮುಖಂಡರಾದ ಮನೀಶ್, ಅನಿಲ್ ಗುಪ್ತ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….