ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಲೈಸನ್ಸ್ ರದ್ದುಗೊಳ್ಳಿಸಿ ಕಠಿಣ ಕ್ರಮಕೈಗೊಳ್ಳಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಆದೇಶ

ಧಾರವಾಡ: ಕಳೆದ ವರ್ಷ ಉತ್ತಮ ಮಳೆಯಾಗಿದ್ದು, ರಾಜ್ಯದಲ್ಲಿ 153 ಲಕ್ಷ ಟನ್ ಆಹಾರ ಉತ್ಪಾದೆಯಾಗಿದೆ. ಪ್ರಸಕ್ತ ವರ್ಷವು ಉತ್ತಮ ಮಳೆಯಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಮಾಡಲಾಗಿದೆ. ಯಾವುದೇ ಮಾರಾಟಗಾರರು ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸಿದರೆ ಹಾಗೂ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಿ ತಕ್ಷಣ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಅಧಿಕಾರಿಗಳಿಗೆ ಆದೇಶಿಸಿದರು.

ಅವರು ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಜಾಗೃತಿ ಕೋಶದ ಕ್ರಮ: ಕೃಷಿ ಇಲಾಖೆಯ ಜಾಗೃತಿ ಕೋಶದಿಂದ 2020-21ನೇ ಸಾಲಿನಲ್ಲಿ 16.20 ಕೋಟಿ ರೂ. ಮೊತ್ತದ ಹಾಗೂ 2021-22ರಲ್ಲಿ  1.06 ಕೋಟಿ ರೂ. ಮೊತ್ತದ ನಕಲಿ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ವಶಪಡಿಸಿಕೊಂಡು 2020-21ನೇ ಸಾಲಿನಲ್ಲಿ 55 ಹಾಗೂ 2021-22ರಲ್ಲಿ  13 ಪ್ರಕರಣಗಳನ್ನು ದಾಖಲಿಸಲಾಗಿದೆ.

ನಕಲಿ ಜೈವಿಕ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದ, ಅಂಗಡಿಗಳ ವಿರುದ್ಧ 2019-20ರಲ್ಲಿ 69 ಮೊಕೊದ್ದಮೆಗಳನ್ನು ಹಾಗೂ 2020-21ರಲ್ಲಿ 7 ಮೊಕೊದ್ದಮೆಗಳನ್ನು ಈಗಾಗಲೇ ಹೂಡಲಾಗಿದೆ. ಕಳೆದ ಸಾಲಿನಲ್ಲಿ ರಾಜ್ಯದಾದ್ಯಂತ 266 ಮಾರಾಟಗಾರರ ಪರವಾನಿಗೆಯನ್ನು ರದ್ದು ಪಡಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈಗಾಗಲೇ 15 ಅಂಗಡಿಗಳ ಲೈಸನ್ಸ್ ರದ್ಧುಪಡಿಸಲಾಗಿದೆ ಎಂದು ಅವರು ತಿಳಿಸಿದ್ದರು.

ರಸಗೊಬ್ಬರ ದಾಸ್ತಾನು: ರಾಜ್ಯದಲ್ಲಿ ಅಗತ್ಯವಿರುವಷ್ಟು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಎಂದು ಸಚಿವರು ತಿಳಿಸಿದರು.

ಕೃಷಿ ಇಲಾಖೆಯ ಗುಣ ನಿಯಂತ್ರಣ ವಿಭಾಗ: ಕೃಷಿ ಇಲಾಖೆಯ ಗುಣ ನಿಯಂತ್ರಣ ವಿಭಾಗದಿಂದ ರಾಜ್ಯದಲ್ಲಿ 3298 ಬೀಜ ಮಳಿಗೆ, 4539 ರಸಗೊಬ್ಬರ ಮಳಿಗೆ ಮತ್ತು 3277 ಪೀಡನಾಶಕ ಮಳಿಗೆಗಳಿಗೆ ಅಧಿಕಾರಿಗಳು ಭೇಟಿ ನೀಡಿ, ತಪಾಸಣೆ ಮಾಡಿದ್ದಾರೆ. ಮತ್ತು 296 ಬೀಜ ಮಳಿಗೆಗಳಿಗೆ, 779 ರಸಗೊಬ್ಬರ ಮಳಿಗೆಗಳಿಗೆ ಹಾಗೂ 333 ಪೀಡನಾಶಕ ಮಳಿಗೆಗಳಿಗೆ ಶೋಕಾಸ್ ನೋಟೀಸ್ ನೀಡಿದ್ದಾರೆ. ಮತ್ತು ಬೀಜ ಮಳಿಗೆ 3 ರಸಗೊಬ್ಬರ ಮಳಿಗೆ 2 ಪೀಡನಾಶಕ ಮಳಿಗೆಗಳನ್ನು ಜಪ್ತಿ ಮಾಡಿದ್ದಾರೆ.

ಅದೆ ರೀತಿ ದಾರವಾಡ ಜಿಲ್ಲೆಯ 72 ಬೀಜ ಮಳಿಗೆ, 54 ರಸಗೊಬ್ಬರ ಮಳಿಗೆ ಮತ್ತ 41 ಪೀಡನಾಶಕ ಮಳಿಗೆಗಳನ್ನು  ಅಧಿಕಾರಿಗಳು ತಪಾಸಣೆ ಮಾಡಿ, ಒಂದು ಬೀಜ ಮಳಿಗೆ, ಆರು ರಸಗೊಬ್ಬರ ಮಳಿಗೆಗಳಿಗೆ ಶೋಕಾಸ್ ನೋಟೀಸ್ ನೀಡಿದ್ದಾರೆ. ಮತ್ತು ಒಂದು ಬೀಜ ಮಳಿಗೆ ಮತ್ತು ಒಂದು ರಸಗೊಬ್ಬರಳ ಮಳಿಗೆಯನ್ನು ಜಪ್ತಿ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.

ಕೃಷಿ ಬದು, ಹೊಂಡ ನಿರ್ಮಾಣ: ಪ್ರಧಾನ ಮಂತ್ರಿಗಳ ಘೋಷಣೆ ‘ಕ್ಯಾಚ್ ದ ರೆನ್ ವೇರ್ ಇಟ್ ಫಾಲ್ಸ್’  ಅಡಿಯಲ್ಲಿ ಕಳೆದ ವರ್ಷ ರಾಜ್ಯದಲ್ಲಿ ಉದ್ಯೋಗ ಖಾತ್ರಿಯೋಜನೆಯಲ್ಲಿ 1 ಕೋಟಿ 17 ಲಕ್ಷ ಮಾನವ ದಿನಗಳನ್ನು ಸೃಜಿಸಿ, ರೂ.335 ಕೋಟಿ ವೆಚ್ಚ ಭರಿಸಿ, 60,500 ಹೆಕ್ಟೇರ್ ಬದು ನಿರ್ಮಾಣ ಹಾಗೂ 15,504 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಮತ್ತು ಧಾರವಾಡ ಜಿಲ್ಲೆಯಲ್ಲಿ 281 ಹೆಕ್ಟೆರ ಭೂಮಿಯಲ್ಲಿ ಬದು ನಿರ್ಮಾಣ ಹಾಗೂ 48 ಹೆಕ್ಟೇರ್ ನಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಿಸಾನ್ ಯೋಜನೆ ಪರಿಹಾರ:  ಕೇಂದ್ರ ಸರ್ಕಾರದ ಪಿ.ಎಂ. ಕಿಸಾನ್ ಯೋಜನೆಯಡಿ ಡಿಸೆಂಬರ್-2019 ರಿಂದ ಮೇ-2021ರವರೆಗೆ ಧಾರವಾಡ ಜಿಲ್ಲೆಯ 1.21 ಲಕ್ಷ ರೈತರಿಗೆ  ರೂ. 164.89 ಕೋಟಿ ಪರಿಹಾರವನ್ನು ಮತ್ತು ರಾಜ್ಯ ಸರ್ಕಾರದ ಸಿ.ಎಂ. ಕಿಸಾನ್ ಯೋಜನೆಯಡಿ ಆಗಸ್ಟ್ -2019 ರಿಂದ ಮಾರ್ಚ್-2021ರವರೆಗೆ ಧಾರವಾಡ ಜಿಲ್ಲೆಯ 1.15 ಲಕ್ಷ ರೈತರಿಗೆ ರೂ. 69.90 ಕೋಟಿ ಪರಿಹಾರವನ್ನು ಜಮೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಲಾಕ್‍ಡೌನ್ ಅವಧಿಯಲ್ಲಿಯೂ ಕೃಷಿಗೆ ಯಾವುದೆ ತೊಂದರೆಯಾಗದಂತೆ ಕ್ರಮವಹಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಧಾರವಾಡ ಜಿಲ್ಲಾಧಿಕಾರಿಗಳು ಕೃಷಿ ಪರಿಕರಗಳನ್ನು ಖರೀದಿಸಲು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಿದ್ದು, ಎಲ್ಲ ಖಾಸಗಿ ಮಾರಾಟಗಾರರಿಗೆ ಕಡ್ಡಾಯವಾಗಿ ಈ ಅವಧಿಯಲ್ಲಿ ಮಾರಾಟ ಮಳಿಗೆ ತೆರೆದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಲು ಕ್ರಮವಹಿಸಬೇಕು. ನಿಯಮ ಪಾಲಿಸದಿದ್ದಲ್ಲಿ ಅಂತಹ ಮಳಿಗೆಗಳಿಗೆ ಶೋಕಾಸ್ ನೋಟೀಸ್ ನೀಡಿ, ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ರೈತರಲ್ಲಿ ಗೊಬ್ಬರದ ಬ್ರ್ಯಾಂಡ್‍ಗಳ ಬಗ್ಗೆ ಗೊಂದಲವಿದೆ. ಯಾವ ಗೊಬ್ಬರ ಚಿಲದಲ್ಲಿ ಯಾವ ಯಾವ ಗೊಬ್ಬರದ ಮಿಶ್ರಣವಿದೆ ಎಂಬುದರ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಕೆಲವು ಭಾಗದಲ್ಲಿ ಹೆಸರು ಬಿತ್ತನೆ ಬೀಜಕ್ಕೆ ಹೆಚ್ಚು ಬೇಡಿಕೆ ಇದ್ದು, ರೈತರ ಬೇಡಿಕೆಗೆ ತಕ್ಕಂತೆ ಪೂರೈಸಬೇಕು. ಬೆಳೆ ಪರಿಹಾರದಲ್ಲಿ ಪೆರಲ್ ಮತ್ತು ಮಾವು ಸೆರ್ಪಡೆ ಮಾಡಿ, ಹೊಸ ಆದೇಶ ಹೊರಡಿಸಬೇಕೆಂದು ಸಚಿವರಿಗೆ ವಿನಂತಿಸಿದರು.

ಶಾಸಕ ಸಿ.ಎಂ.ನಿಂಬಣ್ಣವರ ಮಾತನಾಡಿ, ಕಾಪು ದಾಸ್ತಾನು ಇರುವ ರಸಗೊಬ್ಬರವನ್ನು ಖರೀದಿಸಲು ರೈತರು ಹಿಂಜರಿಯುತ್ತಿದ್ದಾರೆ. ಈ ಕುರಿತು ರೈತರಿಗೆ ತಿಳುವಳಿಕೆ ನೀಡಿ, ಸಂಶಯಗಳನ್ನು ನೀವಾರಿಸಬೇಕು. ಮತ್ತು ಕೆಲವು ಸಹಕಾರಿ ಸಂಘಗಳಲ್ಲಿ ಕೆಎಸ್‍ಸಿಎಂಎಫ್ ತಪ್ಪಿನಿಂದಾಗಿ ರೈತರಿಗೆ ಹೆಚ್ಚುವರಿ ದರದಲ್ಲಿ ಗೊಬ್ಬರ ಮಾರಾಟ ಮಾಡುತ್ತಿದ್ದು, ರೈತರು ದೂರು ಸಲ್ಲಿಸಿದ್ದಾರೆ. ಅಧಿಕಾರಿಗಳು ಈ ಕುರಿತು ಕ್ರಮ ವಹಿಸಬೇಕೆಂದು ಹೇಳಿದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಖಾಸಗಿ ವಿತರಕರು ಮಾರಾಟ ಮಾಡುವ ಬೀಜದ ದರ ಮತ್ತು ರೈತ ಸಂಪರ್ಕ ಕೇಂದ್ರದಲ್ಲಿ ನೀಡುವ ದರ ವ್ಯತ್ಯಾಸವಿದ್ದು, ರೈತರಿಗೆ ಮಾರುಕಟ್ಟೆಯಲ್ಲಿ ಸಿಗುವ ಬೀಜಗಳಿಗಿಂತ ಆರ್‍ಎಸ್‍ಕೆಯಲ್ಲಿ ಸಿಗುವ ಬೀಜಗಳು ಪ್ರಮಾಣಿಕೃತವಾಗಿದ್ದು, ಹೆಚ್ಚು ಉತ್ಪನ್ನ ಮತ್ತು ಲಾಭ ಬರುತ್ತದೆ ಎಂದು ರೈತರಿಗೆ ಜಾಗೃತಿ ಮೂಡಿಸಬೇಕು. ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಸಮಸ್ಯೆ ಪರಿಹರಿಸಬೇಕೆಂದು ಅವರು ಹೇಳಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೋರತೆ ಇಲ್ಲ. ಪ್ರತಿ ತಾಲೂಕಿನಲ್ಲಿ ಪ್ರತಿ ದಿನ ಲಭ್ಯವಿರುವ ಬಿತ್ತನೆ ಬೀಜ, ರಸಗೊಬ್ಬರದ ಮಾಹಿತಿಯನ್ನು ಮಾದ್ಯಮ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ನೀಡಲಾಗುತ್ತಿದೆ. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ರೈತ ಸಂಪರ್ಕ ಕೇಂದ್ರ, ಗೊಬ್ಬರ ಮಾರಾಟ ಮಳಿಗೆಗಳನ್ನು ತೆರದು ರೈತರಿಗೆ ವಿತರಿಸಲು ಅವಕಾಶ ನೀಡಲಾಗಿದೆ. ಸರಿಯಾದ ಸಮಯಕ್ಕೆ ತೆರಯದೆ ಇರುವ ಅಂಗಡಿಗಳಿಗೆ  ಶೋಕಾಸ್ ನೋಟೀಸ್ ನೀಡಿ, ಕ್ರಮಕೈಗೊಳ್ಳಲಾಗುವುದು ಮತ್ತು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ನಕಲಿ ಬೀಜ, ಗೊಬ್ಬರ ಮಾರಾಟ ಹಾಗೂ ಕೃತಕ ಅಭಾವ ಸೃಷ್ಟಿಸಿದರೆ ಅಂತಹ ಅಂಗಡಿಗಳ ಲೈಸನ್ಸ್ ರದ್ದು ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶಿಲಾ.ಬಿ., ಪ್ರೋಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಬಿ.ಚಟ್ಟಿ, ಕೃಷಿ ನಿರ್ದೇಶನಾಲಯದ ಸಾವಯವ ವಿಭಾಗದ ಅಪರ ನಿರ್ದೇಶಕ ಜೆ.ವೆಂಕಟರಾಮರೆಡ್ಡಿ ಪಾಟೀಲ ಸೇರಿದಂತೆ ಇತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!