ದೊಡ್ಡಬಳ್ಳಾಪುರ: ತೈಲ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕರೊನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಗದಾ ಪ್ರಹಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ತಾಲೂಕಿನ ವಿವಿಧ ಪೆಟ್ರೋಲ್ ಬಂಕ್ ಗಳ ಮಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕಿನ ಪಿಂಡಕೂರ್ ತಿಮ್ಮನಹಳ್ಳಿ ಪೆಟ್ರೋಲ್ ಬಂಕ್ ಬಳಿ ಜಟಕಾ ಗಾಡಿ ಓಡಿಸುವ ಮೂಲಕ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಿಂದ ಸಾರ್ವಜನಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕ್ರಿಕೆಟ್ ರನ್ ಗಳಂತೆ ಪೆಟ್ರೋಲ್ ಮತ್ತು ಡಿಸೇಲ್ 100 ನಾಟ್ ಔಟ್ ಎಂಬಂತೆ ಒಂದೇ ಸಮ ಏರಿಕೆಮಾಡಿ, ಜನಸಾಮಾನ್ಯರಿಗೆ ಜೀವನದ ಮೇಲೆ ಬರೆ ಎಳೆಯುತ್ತಿದೆ.
ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ಅಚ್ಚೆದಿನ್ ಬರುತ್ತೆ ಎಂದ ಮೋದಿ ದೇಶದ ಆರ್ಥಿಕ ಸ್ಥಿತಿಯನ್ನು ಪ್ರಪಾತಕ್ಕೆ ಇಳಿಸಿಬಿಟ್ಟಿದ್ದಾರೆ. ಸ್ವಾತಂತ್ರ್ಯ ನಂತರ ದೇಶವನ್ನಾಳಿದ ಸರ್ಕಾರಗಳು ಸಮದೇಶವನ್ನು ಅಭಿವೃದ್ಧಿಪಥದತ್ತ ಕೊಂಡೋಯ್ದರೆ ಮೋದಿ ಸರ್ಕಾರಕ್ಕೆ ಪಾತಾಳಕ್ಕೆ ಇಳಿಸಿದೆ.
ಪೆಟ್ರೋಲ್, ಡಿಸೇಲ್, ಅಡಿಗೆ ಎಣ್ಣೆ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ದ ಜನತೆ ಹೆಚ್ಚುತ್ತುಕೊಂಡು ಬಿಜೆಪಿ ಸರ್ಕಾರವನ್ನು ಕೆಳಗಿಳಿಸುವತ್ತ ಚಿಂತನೆ ನಡೆಸಬೇಕಿದೆ ಎಂದರು.
ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಇದು ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ, ಬಡವರ ರಕ್ತ ಹೀರುವ ಸರ್ಕಾರ, ಜನ ಕೊರೋನಾ ಸಂಕಷ್ಟದಿಂದ, ಸಾವು-ನೋವಿನಿಂದ, ಆರ್ಥಿಕ ಸಮಸ್ಯೆಗಳಿಂದ ಸಾಯುತ್ತಿದ್ದಾರೆ, ಅಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ದರ ಈ ರೀತಿ ದಿನದಿಂದ ದಿನಕ್ಕೆ ಹೆಚ್ಚಿಸಿದರೆ ಬಡವರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ಕಾಳಜಿಯಿದ್ದರೆ ಇಂಧನ ಮೇಲೆ ಸುಂಕ ದರವನ್ನು ಕಡಿಮೆ ಮಾಡಲಿ, ರಾಜ್ಯ ಸರ್ಕಾರಗಳು ಕೂಡ ಮಾಡಲಿ, ಇಲ್ಲದಿದ್ದರೆ ಜನತೆಗೆ ಬದುಕುವುದು ಬಹಳ ಕಷ್ಟವಾಗುತ್ತದೆ, ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳವಾದ ಕೂಡಲೇ ಸಾಗಣೆ-ಸಾಗಾಟ ದರ ಹೆಚ್ಚಳವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತದೆ, ದೇಶ ಹಾಳು ಮಾಡಬೇಡಿ ಎಂದು ಪ್ರಧಾನಿ ಮೋದಿಯವರನ್ನು ನೇರವಾಗಿ ಉದ್ದೇಶಿಸಿ ಹೇಳಿದರು.
ತಾಲೂಕಿನ ಹೊಸಹುಡ್ಯ, ಬಾಶೆಟ್ಟಿಹಳ್ಳಿ, ಪಿಂಡಕೂರ್ ತಿಮ್ಮನಹಳ್ಳಿ, ಹಸನ್ ಘಟ್ಟ ಕ್ರಾಸ್, ಪಾಲನಜೋಗಹಳ್ಳಿ, ಡಿ.ಕ್ರಾಸ್, ಸೌಂದರ್ಯ ಮಹಲ್, ಸಿಡಿ ಅಗ್ರಹಾರ, ಜಾಲಪ್ಪ ಬಳಿಯ ಪೆಟ್ರೋಲ್ ಬಂಕ್ ಬಳಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಪೆಟ್ರೋಲ್ 100 ನಾಟ್ ಔಟ್’ ಎಂಬ ಬರಹವುಳ್ಳ ಫಲಕಗಳನ್ನು ಹಿಡಿದಿದ್ದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಕೆಲ ಕಾಲ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂಬ ಘೋಷಣೆಗಳನ್ನು ಕೂಗಿದರು.
ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….