ಅವಹೇಳನಾಕಾರಿ ಹೇಳಿಕೆ: ನಟ ಚೇತನ್ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಕದಂಬ ಬ್ರಿಗೇಡ್ ನಿಂದ ಪೊಲೀಸರಿಗೆ ದೂರು

ದೊಡ್ಡಬಳ್ಳಾಪುರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ನಟ ಚೇತನ್ ವಿರುದ್ಧ ಕದಂಬ ಬ್ರಿಗೇಡ್ ನಿಂದ ನಗರದ ಡಿವೈಎಸ್ಪಿ ಕಚೇರಿಗೆ ದೂರು ನೀಡಲಾಗಿದೆ.

ಇತ್ತೀಚೆಗೆ ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕದಂಬ ಬ್ರಿಗೇಡ್ ವತಿಯಿಂದ ದೂರು ದಾಖಲಿಸಲಾಗಿದೆ. ಇದರ ಜೊತೆಗೆ ಚೇತನ್ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರು ಮತ್ತು ಬ್ರಾಹ್ಮಣತ್ವದ ವಿರುದ್ಧ ಅಸಂಬದ್ಧ ಹ್ಯಾಷ್‌ಟ್ಯಾಗ್ ಗಳ ಮೂಲಕ ಅಭಿಯಾನ ನಡೆಸಿದ ರಾಷ್ಟ್ರೀಯ ಮುಸ್ಲಿಂ ಮೋರ್ಚಾ ಸಂಘಟನೆಯ ವಿರುದ್ಧವೂ ಸಹ ದೂರು ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕದಂಬ ಬ್ರಿಗೇಡ್ ನ ಸಂಸ್ಥಾಪಕ ಜಿ.ಎನ್.ಪ್ರದೀಪ್, ಭಾರತದಲ್ಲಿ ದಶಕಗಳಿಂದಲೂ ಆಂತರಿಕ ಶತೃಗಳು ದಿನೇ ದಿನೇ ದೇಶದ ಕೋಮು ಸೌಹಾರ್ದತೆ ಕೆಡಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ನಟ ಚೇತನ್ ಹಾಗೂ ರಾಷ್ಟ್ರೀಯ ಮುಸ್ಲಿಂ ಮೋರ್ಚಾ ಹೆಸರಿನ ಸಂಘಟನೆಯು ಬ್ರಾಹ್ಮಣ್ಯದ ವಿರುದ್ಧ ಅಸಂಬದ್ಧ ಹೇಳಿಕೆ ನೀಡುವ, ಸಾಮಾಜಿಕ ಜಾಲತಾಣಗಳಲ್ಲಿ ದುರುದ್ದೇಶಪೂರಿತವಾಗಿ ಸುಳ್ಳು ವಿಷಯಗಳನ್ನು ಪಸರಿಸುವ ಮೂಲಕ ಶಾಂತಿಯಿಂದಿರುವ ಸಮಾಜದಲ್ಲಿ ಕೋಮುಭಾವನೆ ಕೆಡಿಸುವ ಪ್ರಯತ್ನ ಮಾಡಿರುವುದಲ್ಲದೆ, ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಆದ್ದರಿಂದ ಇಂತಹ ಸಂಕುಚಿತ ಮನೋಭಾವದ ಕನಿಷ್ಠರಿಗೆ ಕಾನೂನು ರೀತ್ಯಾ ಬುದ್ಧಿ ಕಲಿಸುವ ಉದ್ದೇಶದಿಂದ ಸಂಘದ ಕಾನೂನು ಸಲಹೆಗಾರಾದ ಟಿ.ಕೆ.ಹನುಮಂತರಾಜು ಬಳಿ ಚರ್ಚಿಸಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ದಲಿತ ಸಂಘದ ರಾಜ್ಯ ಉಪಾಧ್ಯಕ್ಷ ಟಿ.ಶ್ರೀನಿವಾಸ್, ದೇಶದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಹಾಗೂ ದಲಿತರ ಹೆಸರನ್ನು ದುರ್ಬಳಕೆ ಮಾಡಿಕೊಂಡು ದೇಶದ ಸಾರ್ವಭೌತ್ವಕ್ಕೆ ಧಕ್ಕೆ ತರುವ ಪ್ರಯತ್ನ ಕೆಲವರಿಂದ ನಡೆಯುತ್ತಿದೆ. ನಿಜವಾದ ದಲಿತರು ಯಾವತ್ತೂ ದೇಶದ ಸಾಂಸ್ಕೃತಿಕ ಹಿನ್ನೆಲೆಯನ್ನಾಗಲೀ, ಯಾವ ಧರ್ಮವನ್ನೇ ಆಗಲೀ ದೂಷಿಸಲಿಲ್ಲ. ಆದರೆ ಕೆಲವು ಕಿಡಿಗೇಡಿ ಮನಸ್ಥಿತಿಯವರು ದೇಶದ ಐಕ್ಯತೆಗೆ ಧಕ್ಕೆ ತರಲು ಮಹಾಪುರುಷರ ಮತ್ತು ಸಮುದಾಯದ ಹೆಸರನ್ನು ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ. ಇಂತಹ ಮನಸ್ಥಿತಿಯ ವ್ಯಕ್ತಿಗಳ ಹಾಗೂ ಸಂಘಟನೆಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುವುದು ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!