ದೊಡ್ಡಬಳ್ಳಾಪುರ ಮೂಲದ ಸದಭಿರುಚಿಯ ಚಿತ್ರಗಳ ಹಿರಿಯ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ದೊಡ್ಡಬಳ್ಳಾಪುರ ತಾಲೂಕಿನ ಕೋನೇನಹಳ್ಳಿ ಮೂಲದ ಕೆ.ಸಿ.ಎನ್.ಚಂದ್ರಶೇಖರ್ (69ವರ್ಷ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರು ಡಾ.ರಾಜ್ ಕುಮಾರ್ ನಟನೆಯ ಬಬ್ರುವಾಹನ, ಹುಲಿ ಹಾಲಿನ‌ ಮೇವು, ಬಂಗಾರದ ಮನುಷ್ಯ, ಡಾ.ವಿಷ್ಣುವರ್ಧನ್ ನಟನೆಯ ಜಯಸಿಂಹ, ರೆಬಲ್ ಸ್ಟಾರ್ ಅಂಬರೀಶ್ ನಟನೆಯ ಅಂತ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳನ್ನು ನಿರ್ಮಿಸಿದ್ದರು.

ದೊಡ್ಡಬಳ್ಳಾಪುರ ತಾಲೂಕಿನ ಕೋನೇನಹಳ್ಳಿ ಮೂಲದವರಾದ ಕೆ.ಸಿ.ಎನ್.ಚಂದ್ರಶೇಖರ್, ದೊಡ್ಡಬಳ್ಳಾಪುರದಲ್ಲಿ ಬಾಲ್ಯವನ್ನು ಕಳೆದವರು. ಕೆ.ಸಿ.ಎನ್ ಗೌಡ್ರು ಕುಟಂಬದ ಇವರು, ರಾಜಕಮಲ್ ಆರ್ಟ್ಸ್ (ದೊಡ್ಡಬಳ್ಳಾಪುರ) ಬ್ಯಾನರ್ ಅಡಿಯಲ್ಲಿ ಬಹಳಷ್ಟು ಚಿತ್ರಗಳ‌ ನಿರ್ಮಾಣ ಮಾಡಿ, ವಿತರಕರಾಗಿದ್ದರು.

ಬೆಂಗಳೂರಿನಲ್ಲಿ ನೆಲೆನಿಂತು ರಾಜ್ಯಮಟ್ಟದಲ್ಲಿ ಹೆಸರುಗಳಿಸಿದ ಇವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದರು.

ದೊಡ್ಡಬಳ್ಳಾಪುರ ನಗರದ ರಾಜಕಮಲ್ ಚಿತ್ರಮಂದಿರ, ಬೆಂಗಳೂರಿನ ಊರ್ವಶಿ ಚಿತ್ರಮಂದಿರ, ನವರಂಗ್ ಚಿತ್ರಮಂದಿರ ಇವರ ಕುಟುಂಬದ ಒಡೆತನದ್ದಾಗಿವೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಲವು ಚಿತ್ರಗಳ ಚಿತ್ರೀಕರಣಕ್ಕೆ ಕೆಸಿಎನ್ ಚಂದ್ರು ಕಾರಣ ಎನ್ನಬಹುದಾಗಿದೆ. ರಾಜಕಮಲ್ ಆರ್ಟ್ಸ್ (ದೊಡ್ಡಬಳ್ಳಾಪುರ) ಹೆಸರಿನ ಮೂಲಕ ಇವರ ಕುಟುಂಬ ಚಿತ್ರರಂಗದಲ್ಲಿ ದೊಡ್ಡಬಳ್ಳಾಪುರದ ಕೀರ್ತಿ ಬೆಳಗಿದ್ದಾರೆ.

ಇತ್ತೀಚೆಗೆ ದೊಡ್ಡಬಳ್ಳಾಪುರ ನಗರದ ಖಾಸಗಿ ಕಾಲೇಜೊಂದರಲ್ಲಿ ನಟ ಸುಂದರ್ ರಾಜ್ ಅವರೊಂದಿಗೆ ಕೆ.ಸಿ.ಎನ್.ಚಂದ್ರು ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಚಂದ್ರುರವರು ಕೇವಲ ಚಿತ್ರರಂಗಕ್ಕೆ ಸೀಮಿತವಾಗದೆ, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಆಸಕ್ತಿಹೊಂದಿದ್ದು, ಹಲವಾರು ಸದಭಿರುಚಿಯ ಚಿತ್ರಗಳನ್ನು‌ ಕನ್ನಡ ಚಿತ್ರರಂಗಕ್ಕೆ ನೀಡಿದ್ದರು.

ಮೃತರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಅವರ ಸ್ವಗೃಹದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]