ದೊಡ್ಡಬಳ್ಳಾಪುರ: ಮಹಾಮಾರಿ ಕರೊನಾ ಸೋಂಕು ನಿವಾರಣೆಗೆ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಸಹಕಾರ ಅಗತ್ಯವಾಗಿದ್ದು, ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಶಾಸಕ ಟಿ.ವೆಂಕಟರಮಣಯ್ಯ ಮನವಿ ಮಾಡಿದರು.
ತಾಲೂಕಿನ ಚೆನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿಯ ಆವರಣದಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲೋಹಳ್ಳಿ ಪುನೀತ್ ಆಯೋಜಿಸಿದ್ದ, ಕರೊನಾ ಸೋಂಕು ತಡೆಗಟ್ಟಲು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಅರ್ಚಕ ವೃಂದದವರಿಗೆ ಆಹಾರ ಪದಾರ್ಥಗಳ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋವಿಡ್ ಸೋಂಕನ್ನು ತಡೆಗಟ್ಟಲು ತಾಲೂಕು ಆಡಳಿತ ಬಹಳಷ್ಟು ಶ್ರಮಿಸುತ್ತಿದೆ, ಸಾರ್ವಜನಿಕರು ಸಹ ಸೋಂಕಿನ ವಿರುದ್ದ ಹೋರಾಡುವ ಜಾಗೃತಿ ಮೈಗೂಡಿಸಬೇಕೆಂದರು.
ಕೋವಿಡ್ ಸೋಂಕು ತಡೆಗಟ್ಟಲು ಘೋಷಿಸಲಾದ ಲಾಕ್‍ಡೌನ್ ನಿಂದಾಗಿ ಸಂಕಷ್ಟಕ್ಕೆ ಒಳಗಾದವರಿಗೆ ಹಾಗೂ ಕರೊನಾ ವಾರಿಯರ್ಸ್ ಗಳಿಗೆ, ಮಲ್ಲೋಹಳ್ಳಿ ಪುನೀತ್ ಆಹಾರ ಪದಾರ್ಥಗಳ ಕಿಟ್ ವಿತರಿಸುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ದಯಾನಂದಸ್ವಾಮಿ, ಚುಂಚೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಚನ್ನಮ್ಮ ರಾಮಲಿಂಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದ್ರಮ್ಮ, ಉಪಾಧ್ಯಕ್ಷೆ ಸುಧಾ ಮಂಜುನಾಥ್, ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ್ ಕುಮಾರ್, ಸದಸ್ಯ ಮಂಜುನಾಥ್, ಗ್ರಾಪಂ ಮಾಜಿ ಅಧ್ಯಕ್ಷೆ ಉಮಾ ಗಂಗಣ್ಣ, ಡಿ.ಮಂಜುನಾಥ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಸೋಮಶೇಖರ್ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….