ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ 2021ರ ಜೂನ್ 21 ರಂದು ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ (DD National Channel) ಡಿ.ಡಿ ನ್ಯಾಷನಲ್ ಚಾನೆಲ್‍ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ನೇರ ಪ್ರಸಾರವಾಗಲಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಇದ್ದುಕೊಂಡು ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸಬಹುದು.
ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆ-ಸಮಾರಂಭಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಷೇಧಿಸಲಾಗಿದ್ದು, ಇದರ ಪ್ರಯುಕ್ತ ಭಾರತ ಸರ್ಕಾರದ ಆಯುಷ್ ಮಂತ್ರಾಲಯವು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮನೆಯಿಂದಲೇ “BE WITH YOGA BE AT HOME” ಘೋಷವಾಕ್ಯದೊಂದಿಗೆ ಆಚರಿಸುತ್ತಿದೆ.
ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಶಾಲಾ-ಕಾಲೇಜಿನ ಸಿಬ್ಬಂದಿಗಳು, ಸರ್ಕಾರಿ, ಅರೆ ಸರ್ಕಾರಿ ಸೇವಾ ಸಿಬ್ಬಂದಿಗಳು ಹಾಗೂ ಇನ್ನಿತರ ಆಸಕ್ತರು ತಮ್ಮ ಮನೆಯಲ್ಲಿಯೇ ಇದ್ದುಕೊಂಡು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
ಸಾರ್ವಜನಿಕರು ಸಾಮಾಜಿಕ ಜಾಲತಾಣವಾದ Youtube ನಲ್ಲಿ Director Mdniy ಲಿಂಕ್‍ನ್ನು ಉಪಯೋಗಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….