ಬೆಂಗಳೂರು: ಇಂದಿನಿಂದ ಶೈಕ್ಷಣಿಕ ವರ್ಷ ಆರಂಭವಾಗಿದೆ. ಜುಲೈ 1 ರಿಂದ ಶಾಲೆಗಳನ್ನು ಆರಂಭಿಸಲು ಸಿದ್ದತೆ ನಡೆಸಲಾಗಿದೆ.
ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ಇಂದಿನಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರಾದ ಅನ್ಬುಕುಮಾರ್ ಸೂಚಿಸಿದ್ದಾರೆ.
ಜುಲೈ ಒಂದರಿಂದ ಶೈಕ್ಷಣಿಕ ವರ್ಷ ಶಾಲಾ ತರಗತಿ ಆರಂಭವಾಗಲಿವೆ ಎನ್ನಲಾಗಿದೆ. ಇದಿನಿಂದ ಮಕ್ಕಳ ಶಾಲಾ ದಾಖಲಾತಿ ಪ್ರಾರಂಭಿಸಿ ಆಗಸ್ಟ್.31ರ ಒಳಗೆ ಮುಕ್ತಾಯಗೊಳಿಸಬೇಕಿದೆ.
ಲಾಕ್ಡೌನ್ ಜಾರಿಯಲ್ಲಿರುವ ಜಿಲ್ಲೆಯವರು ಪಾಸ್ನೊಂದಿಗೆ ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ತಡವಾಗಿದೆ.. ಶಿಕ್ಷಕರು ಅನ್ಯ ಕಾರಣ ನೀಡುವಂತಿಲ್ಲ. ಕೋವಿಡ್ ಸಮಯದಲ್ಲಿ ಪೌರಕಾರ್ಮಿಕರ ಮಾದರಿಯಲ್ಲಿ ಶಿಕ್ಷಕರು ಕೆಲಸ ಮಾಡಬೇಕು.ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಹೀಗಾಗಿ ಶೈಕ್ಷಣಿಕ ವರ್ಷ ಮೂಂದುಡುವ ಪ್ರಶ್ನೆಯೇ ಇಲ್ಲ.
ಕೋವಿಡ್ ಹಿನ್ನೆಲೆ ತರಗತಿಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾಗದೆ ಇದ್ದರೆ.ಪರ್ಯಾಯವಾಗಿ ಆನ್ಲೈನ್, ದೂರದರ್ಶನ, ಅಂತರ್ಜಾಲ ಕಲಿಕೆಯನ್ನು ನೀಡುವಂತೆ ಶಿಕ್ಷಣ ಇಲಾಖೆ ಆಯಕ್ತರು ಸೂಚನೆ ನೀಡಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….