ದೊಡ್ಡಬಳ್ಳಾಪುರ: ರಾಜ್ಯದಲ್ಲಿ ದೊಡ್ಡಬಳ್ಳಾಪುರ ತಾಲೂಕು ಪಾಸಿಟಿವ್ ರೇಟ್ ಪಟ್ಟಿಯಲ್ಲಿ ಕೆಂಪು ವಲಯಕ್ಕೆ ಸೇರ್ಪಡೆಯಾಗಿರುವ ಹಿನ್ನಲೆ, ಸೋಂಕನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಾಲೂಕು ಆಡಳಿತ ಲಾಕ್ಡೌನ್ ಬಿಗಿಗೊಳಿಸಿದೆ.
ರಾಜ್ಯ ಸರ್ಕಾರ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ಡೌನ್ ಅನ್ನು ಮುಂದುವರಿಸಿರುವುದು ಹಾಗೂ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆಯ ಮೇರೆಗೆ ಬೇಕಾಬಿಟ್ಟಿ ಓಡಾಟಕ್ಕೆ ಪೊಲೀಸರು ಬ್ರೇಕ್ ಹಾಕುತ್ತಿದ್ದಾರೆ.
ಮತ್ತೊಂದೆಡೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ನಗರದ ಜನನಿಬಿಡ ಪ್ರದೇಶಗಳಲ್ಲಿ ಕೋವಿಡ್ ತಪಾಸಣೆ ತೀವ್ರಗೊಳಿಸಿದ್ದು, ಗ್ರಾಮ ಪಂಚಾಯಿತಿ ವಾರು ಹಾಗೂ ನಗರಸಭೆ ವ್ಯಾಪ್ತಿಗಳಲ್ಲಿ ಕೋವಿಡ್ ಸ್ವಾಬ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರೊಂದಿಗೆ ಸಾರ್ವಜನಿಕ ಸ್ಥಳಗಳಾದ ಸಬ್ ರಿಜಿಸ್ಟರ್ ಕಚೇರಿ, ಎಪಿಎಂಸಿ, ಪೊಲೀಸ್ ಕ್ವಾಟ್ರಸ್, ತಾಲೂಕು ಕಚೇರಿಗಳಲ್ಲಿಯೂ ಕೊವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಇಂದು ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಗೆ ಬಂದಿರುವ ಆರೋಗ್ಯ ಇಲಾಖೆಯ ಒಂಬತ್ತು ಸದಸ್ಯರ ಮೂರು ತಂಡ, ಪೊಲೀಸ್ ಇಲಾಖೆ, ನಗರಸಭೆ ಸಿಬ್ಬಂದಿಗಳ ಸಹಕಾರದೊಂದಿಗೆ ವರ್ತಕರು, ಗ್ರಾಹಕರ ಕೋವಿಡ್-19 ತಪಾಸಣೆಯನ್ನು ಕಾರ್ಯ ನಡೆಸುತ್ತಿದ್ದಾರೆ.
ಇಷ್ಟೆಲ್ಲಾ ಕ್ರಮಗಳ ಹೊರತಾಗಿಯೂ ದೊಡ್ಡಬಳ್ಳಾಪುರ ತಾಲೂಕಿನ ಕುರಿತು ಜಿಲ್ಲಾಡಳಿತ ಸೋಮವಾರ ಬಿಡುಗಡೆ ಮಾಡಲಾದ ಕೋವಿಡ್-19 ಬುಲೆಟಿನ್ ವರದಿಯಲ್ಲಿ, 66ಮಂದಿಗೆ ಸೋಂಕು ದೃಢಪಟ್ಟು, ಮೂವರು ಸಾವನಪ್ಪಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….